ಇನ್ಮುಂದೆ ಜೂ.1ರಿಂದ ಡ್ರೈವಿಂಗ್ ಲೈಸೆನ್ಸ್ ನಲ್ಲಿ ನಿಯಮದಲ್ಲಿ ಬದಲಾವಣೆ – ಕಹಳೆ ನ್ಯೂಸ್
ನವದೆಹಲಿ : ವಾಹನ ಸವಾರರೇ ಗಮನಿಸಿ ಇನ್ಮುಂದೆ ಚಾಲನಾ ಪರವಾನಿಗೆ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಹೋಗಿ ಪರೀಕ್ಷೆಗೆ ಹಾಜರಾಗುವ ಅಗತ್ಯವಿಲ್ಲ. ಬದಲಿಗೆ ಖಾಸಗಿ ಸಂಸ್ಥೆಗಳಿಗೆ ಡ್ರೈವಿಂಗ್ ಪರೀಕ್ಷೆಗಳನ್ನು ನಡೆಸಲು ಮತ್ತು ಪ್ರಮಾಣ ಪತ್ರಗಳನ್ನು ನೀಡಲು ಅಧಿಕಾರ ನೀಡಲಾಗಿದೆ. ಈ ಹೊಸ ನಿಯಮವು ಜೂ.1ರಿಂದ ಜಾರಿಗೆ ಬರಲಿದೆ. ಖಾಸಗಿ ಚಾಲನಾ ತರಬೇತಿ ಕೇಂದ್ರಗಳಿಗೆ ಸರ್ಕಾರ ಹೊಸ ನಿಯಮಗಳನ್ನು ತಂದಿದೆ. ಇದರ ಪ್ರಕಾರ ಖಾಸಗಿ ಚಾಲನಾ ತರಬೇತಿ ಕೇಂದ್ರ ನಡೆಸಲು...







