ಸುರತ್ಕಲ್ ಚಾಕು ಇರಿದು ಜಲೀಲ್ ಹತ್ಯೆ ಪ್ರಕರಣ ; ಸುರತ್ಕಲ್, ಬಜಪೆ, ಕಾವೂರು, ಪಣಂಬೂರಿನಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿ, ಮದ್ಯ ಮಾರಾಟ ನಿಷೇಧ – ಕಹಳೆ ನ್ಯೂಸ್
ಮಂಗಳೂರು, ಡಿ 25 : ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದ ಫ್ಯಾನ್ಸಿ ಸ್ಟೋರ್ ಮಾಲಕ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಬಜಪೆ ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಹಾಗೂ ಮದ್ಯ ಮಾರಾಟ ನಿಷೇಧ ಜಾರಿಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಡಿ.25 ರ ಬೆಳಗ್ಗೆ 6...







