Recent Posts

Tuesday, September 8, 2026

ರಾಜ್ಯ

ರಾಜ್ಯಸುದ್ದಿ

ಸಾಲ ತೀರಿಸಲು ಹಣ ಕೊಟ್ಟಿಲ್ಲವೆಂದು ರಾಡ್‌ನಿಂದ ಹೊಡೆದು ತಂದೆಯನ್ನೇ ಕೊಂದ ಮಗ – ಕಹಳೆ ನ್ಯೂಸ್

ಕೋಲಾರ: ಸಾಲ (Debt) ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ (Father) ರಾಡ್‌ನಿಂದ ಹೊಡೆದು ಮಗ (Son) ಕೊಂದಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಇನ್ನೂ ಘಟನೆ ಸಂಬಂಧ 24 ಗಂಟೆಯೊಳಗೆ ಪ್ರಕರಣ ಭೇದಿಸಿ ಆರೋಪಿಯನ್ನ ಬಂಧಿಸಲಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ (Bangarpet) ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸಾಲ ತೀರಿಸಲು ತಂದೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಮಗನೇ ತಂದೆಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ...
ಬೆಂಗಳೂರುರಾಜ್ಯಸುದ್ದಿ

ಓವರ್‌ಟೇಕ್‌ ಮಾಡಿದ್ದಕ್ಕೆ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ್ರು; ದುನಿಯಾ ವಿಜಯ್ ಪುತ್ರನ ವಿರುದ್ಧ ಗಾಯಾಳು ಮನೀಷ್ ಆರೋಪ – ಕಹಳೆ ನ್ಯೂಸ್

ಬೆಂಗಳೂರು: ನಟ ದುನಿಯಾ ವಿಜಯ್(Dunia Vijay) ಅವರ ಪುತ್ರ ಸಾಮ್ರಾಟ್ ವಿಜಯ್ (Case on Samrat Vijay) ವಿರುದ್ಧ ಕಾಲೇಜು ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಘಟನೆ ಕುರಿತು ಗಾಯಾಳು ಮನೀಷ್‌ ಮಾತನಾಡಿದ್ದಾರೆ. ಆರ್.ಆರ್. ನಗರದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಸಾಮ್ರಾಟ್ ವಿಜಯ್ ಅವರ ಕಾರನ್ನು ಓವರ್‌ಟೇಕ್ ಮಾಡಿದ್ದೇ ಜಗಳಕ್ಕೆ ಕಾರಣ ಎನ್ನಲಾಗಿದೆ. ಬಳಿಕ ಸಾಮ್ರಾಟ್ ಹಾಗೂ ಕೆಲವರು ಸಫಾರಿ ಕಾರಿನಲ್ಲಿ ಬಂದು ಮನೀಷ್‌ನನ್ನು ಕರೆದೊಯ್ದು ಹಲ್ಲೆ...
ರಾಜ್ಯಸುದ್ದಿ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಾದಯಾತ್ರೆ ʻಕಹಳೆʼ : ʻಬಳ್ಳಾರಿ ಚಲೋʼಗೆ ಯಡಿಯೂರಪ್ಪ ಚಾಲನೆ! – ಕಹಳೆ ನ್ಯೂಸ್

ರಾಯಚೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಅಧಿಕೃತ ಚಾಲನೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಕಹಳೆ ಮೊಳಗಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು. ಕಹಳೆ ಊದುವ ಮೂಲಕ ವಿಜಯೇಂದ್ರ (BY Vijayendra), ಆರ್.ಅಶೋಕ್, ಶ್ರೀರಾಮುಲು ಹಾಗೂ ಛಲವಾದಿ ನಾರಾಯಣಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ರೈತಗೀತೆಯೊಂದಿಗೆ ಪಾದಯಾತ್ರೆಯ ವೇದಿಕೆ ಕಾರ್ಯಕ್ರಮ ಆರಂಭವಾಯಿತು. ಸುಮಾರು...
ಬೆಂಗಳೂರುರಾಜ್ಯಸುದ್ದಿ

ಬೆಂಗ್ಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಸರಣಿ ಅಪಘಾತ : ತಪ್ಪಿದ ಭಾರೀ ಅನಾಹುತ – ಕಹಳೆ ನ್ಯೂಸ್

ಬೆಂಗಳೂರು: ನಗರದ ಏರ್‌ಪೋರ್ಟ್‌ ರಸ್ತೆಯಲ್ಲಿ  ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಭಾರೀ ಅನಾಹುತವೊಂದು ತಪ್ಪಿದೆ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಏರ್ಪೋರ್ಟ್ ರಸ್ತೆಯ ಫ್ಲೈ ಓವರ್ ಮೇಲೆ ಅಪಘಾತ (Accident) ಸಂಭವಿಸಿದ್ದು, 5 ವಾಹನಗಳು ಜಖಂಗೊಂಡಿವೆ. ಚಲಿಸುತ್ತಿದ್ದ ವೇಳೆ ಮುಂದಿನ ವಾಹನ ಇದ್ದಕ್ಕಿದ್ದಂತೆ ಬ್ರೇಕ್‌ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ವಾಹನಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ. ಪರಿಣಾಮ 1 ಟಿಪ್ಪರ್‌, 4 ಕಾರು ಹಾಗೂ 1 ಟಿಟಿ...
ದೆಹಲಿರಾಜ್ಯಸುದ್ದಿ

ಕೌಶಂಬಿಯ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 11 ಕಾರ್ಮಿಕರು ಸಾವು, ಹಲವರು ಗಂಭೀರ – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ  ಕೌಶಂಬಿ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ 11 ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಕೌಶಂಬಿ ಜಿಲ್ಲಾಧಾಕಾರಿ ಅಮಿತ್ ಕುಮಾರ್ ಪಾಲ್ ಅವರು ಮಾಹಿತಿ ನೀಡಿದ್ದಾರೆ. ಸ್ಫೋಟದ (Blast) ತೀವ್ರತೆಗೆ ಇಡೀ ಕಾರ್ಖಾನೆ ಸಂಪೂರ್ಣವಾಗಿ ನೆಲಸಮವಾಗಿದೆ. ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. ಸದ್ಯ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು, ಅವಶೇಷಗಳಡಿಯಿಂದ...
ದೆಹಲಿರಾಜ್ಯಸುದ್ದಿ

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆರೋಪ – ಡ್ರೈವರ್, ಕಂಡಕ್ಟರ್ ಬಂಧನ – ಕಹಳೆ ನ್ಯೂಸ್

ನವದೆಹಲಿ: ಉತ್ತರ ಪ್ರದೇಶದ  16 ವರ್ಷದ ಬಾಲಕಿಯ ಮೇಲೆ ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ  ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಸ್ ಚಾಲಕ ಹಾಗೂ ಕಂಡಕ್ಟರ್‌ರನ್ನು  ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಾಲಕಿಯನ್ನು ಸುಮಾರು 47 ಕಿಲೋಮೀಟರ್ ದೂರ ಕರೆದೊಯ್ದು ಬಳಿಕ ಕಾಶ್ಮೀರಿ ಗೇಟ್ ಬಸ್ ಟರ್ಮಿನಲ್ ಸಮೀಪದ ರಿಂಗ್ ರೋಡ್ ಬಳಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಆಗಸ್ಟ್ 4ರ ರಾತ್ರಿ ಕಾಶ್ಮೀರಿ ಗೇಟ್...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಬಂಧಿತರಾಗಿದ್ದ 31 ಬಾಂಗ್ಲಾ ಪ್ರಜೆಗಳ ಗಡಿಪಾರು – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಗಡಿಪಾರು ಮಾಡುತ್ತಿದ್ದಾರೆ. ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ ಇವರನ್ನು ಬಿಗಿ ಭದ್ರತೆಯೊಂದಿಗೆ ಪಶ್ಚಿಮ ಬಂಗಾಳದ ಗಡಿ ಭಾಗಕ್ಕೆ ಕರೆದೊಯ್ಯಲಾಗುತ್ತಿದೆ. ಬೆಳ್ಳಂಬೆಳಗ್ಗೆಯೇ 31 ಮಂದಿಯನ್ನು ಪೊಲೀಸರು ಬೆಂಗಳೂರಿನ ಎಸ್‌ಎಂವಿಟಿ ರೈಲ್ವೆ ಟರ್ಮಿನಲ್ ಮೂಲಕ ರೈಲಿನಲ್ಲಿ ಕರೆದೊಯ್ದಿದ್ದಾರೆ. ಸುಮಾರು 20 ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಈ ಗಡಿಪಾರು ಪ್ರಕ್ರಿಯೆ ನಡೆಯುತ್ತಿದೆ. ಪೊಲೀಸ್ ಸಿಬ್ಬಂದಿ...
ರಾಜ್ಯಸುದ್ದಿ

ದೀರ್ಘಾವಧಿಯ ಯುರೇನಿಯಂ ಒಪ್ಪಂದಕ್ಕೆ ಭಾರತ-ಉಜ್ಬೇಕಿಸ್ತಾನ್ ಸಹಿ – ಕಹಳೆ ನ್ಯೂಸ್

ತಾಷ್ಕೆಂಟ್: ಪ್ರಧಾನಿ ನರೇಂದ್ರ ಮೋದಿ  ಅವರ ಪ್ರಮುಖ ಭೇಟಿ ಯಶಕಂಡಿದೆ. ಭಾರತ ಮತ್ತು ಉಜ್ಬೇಕಿಸ್ತಾನ್   ದೀರ್ಘಾವಧಿಯ ಯುರೇನಿಯಂ ಒಪ್ಪಂದಕ್ಕೆ  ಸಹಿ ಹಾಕಿವೆ. ಭಾರತವು ವರ್ಷಗಳಲ್ಲಿ ತನ್ನ ಅತ್ಯಂತ ಪ್ರಮುಖ ಪರಮಾಣು ಇಂಧನ ವಿಜಯಗಳಲ್ಲಿ ಒಂದಾಗಬಹುದಾದದನ್ನು ಪಡೆದುಕೊಂಡಿದೆ. ಭಾರತ ಮತ್ತು ಉಜ್ಬೇಕಿಸ್ತಾನ್ ದೀರ್ಘಾವಧಿಯ ಯುರೇನಿಯಂ ಪೂರೈಕೆ ವ್ಯವಸ್ಥೆಯನ್ನು ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಭಾನುವಾರ ದೃಢಪಡಿಸಿದ್ದಾರೆ. ಇದು ಭಾರತದ ಪರಮಾಣು ವಿದ್ಯುತ್ ಯೋಜನೆಗಳನ್ನು ದೀರ್ಘಾವಧಿಯವರೆಗೆ ಟ್ರ್ಯಾಕ್‌ನಲ್ಲಿಡಲು ಸಹಾಯ ಮಾಡುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಉಜ್ಬೆಕ್...
1 2 3 4 319
Page 2 of 319