ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣ ; ಸಿಐಡಿಗೆ ವರ್ಗಾಯಿಸಿದ ಸರ್ಕಾರ – ಕಹಳೆ ನ್ಯೂಸ್
ಮಂಗಳೂರು, ಅ 18 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ತತ್ಕ್ಷಣದಿಂದಲೇ ಅನ್ವಯವಾಗುವಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಿಐಡಿ ಕಚೇರಿಗೆ ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಸ್ತಾಂತರ ಮಾಡಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ...







