ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ; ಕೊಡಗು, ಸಕಲೇಶಪುರ ಆಯ್ತು, ಇದೀಗ ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ – ಕಹಳೆ ನ್ಯೂಸ್
ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಚಿಕ್ಕಮಗಳೂರಿನಲ್ಲೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಚಿಕ್ಕಮಗಳೂರು: ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಆಕ್ರೋಶ ಹೊರಹಾಕುತ್ತಿದ್ದು, ಕೊಡಗಿನ ನಂತರ ಇದೀಗ ಚಿಕ್ಕಮಗಳೂರಿನಲ್ಲೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಪೊಲೀಸ್ ಭದ್ರತೆಯ ನಡುವೆಯೂ ಜಿಲ್ಲೆಯ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಕಪ್ಪು ಬಾವುಟ ಪ್ರದರ್ಶನ...







