ಸಂಸದ ನಳಿನ್ ಕುಮಾರ್ ಕಟೀಲ್ ಪ್ರಯತ್ನದ ಫಲ | ಸುರತ್ಕಲ್ ಟೋಲ್ ಗೇಟ್ ಸ್ಥಳಾಂತರ – ಹೆದ್ದಾರಿ ಸಚಿವರ ಸಭೆಯಲ್ಲಿ ನಿರ್ಧಾರ ; ಮಾಣಿಯಿಂದ ಸಂಪಾಜೆವರೆಗೆ ಚತುಷ್ಪಥ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆದೇಶ – ಕಹಳೆ ನ್ಯೂಸ್
ನವದೆಹಲಿ, ಮಾ. 16 : ಸಾಕಷ್ಟು ಹೋರಾಟಗಳು ಪ್ರತಿಭಟನೆಯ ಬಳಿಕ ಇದೀಗ ಸುರತ್ಕಲ್ ಟೋಲ್ ಗೇಟನ್ನು ಸ್ಥಳಾಂತರಗೊಳಿಸಿ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ನೇತೃತ್ವದಲ್ಲಿ ಸುರತ್ಕಲ್ ಟೋಲ್ ವಿಚಾರದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳೊಂದಿಗೆ ಸಚಿವರ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯವಾಗಿ ಸುರತ್ಕಲ್ ಟೋಲ್...







