ಇಂಟರ್ನ್ಶಿಪ್ಗೆಂದು ಬಂದಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ; ಮಂಗಳೂರಿನ ವಕೀಲ ರಾಜೇಶ್ ಭಟ್ಗೆ ಷರತ್ತುಬದ್ಧ ಜಾಮೀನು – ಕಹಳೆ ನ್ಯೂಸ್
ಮಂಗಳೂರು: ಇಂಟರ್ನ್ಶಿಪ್ಗೆಂದು ಬಂದಿದ್ದ ಕಾನೂನು ಪದವಿ ವಿದ್ಯಾರ್ಥಿನಿಯೊಬ್ಬರ ಮೇಲೆ ತನ್ನ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿರಿಯ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಸೋಮವಾರ ಜಾಮೀನು ಮಂಜೂರಾಗಿದ್ದು, ಜಾಮೀನು ಪ್ರಕ್ರಿಯೆ ಮುಗಿಸಿ ಇನ್ನೆರಡು ದಿನದಲ್ಲಿ ರಾಜೇಶ್ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ. ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ 2021ರ ಅಕ್ಟೋಬರ್ನಲ್ಲಿ ದೂರು...






