ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ – ಕಹಳೆ ನ್ಯೂಸ್
ಚಿಕ್ಕಬಳ್ಳಾಪುರ: ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಲ್ಲಿನ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೊಲೆರೋ ಹಾಗೂ ಬಲ್ಕರ್ ವಾಗನಗಳು ಮುಖಾಮುಖಿ ಡಿಕ್ಕಿಯಾಗಿವೆ. ಜಕ್ಕೇನಹಳ್ಲಿ ಮೂಲದ 25 ವರ್ಷದ ಅಶೋಕ್ ಹಾಗೂ ಬಲ್ಕರ್ ವಾಹನ ಸವಾರ ಆಂಧ್ರ ಮೂಲದ ನಾಗರಾಜಪ್ಪ ಮೃತ ದುರ್ದೈವಿಗಳು. ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು...







