Breaking News : ನಾಳೆಯಿಂದ ರಾಜ್ಯದ ಯಾವುದೇ ಭಾಗದಲ್ಲಿ ಲಾಕ್ ಡೌನ್ ಇಲ್ಲ ; ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ – ಕಹಳೆ ನ್ಯೂಸ್
ಬೆಂಗಳೂರು: ಕೊರೊನಾ ನಿಯಂತ್ರಿಸಲು ಲಾಕ್‌ಡೌನ್ ಒಂದೇ ಪರಿಹಾರವಲ್ಲ, ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಮೂಲಕ ಕೊರೊನಾ ನಿಯಂತ್ರಿಸಲು ಜನರು ಸಹಕಾರ ನೀಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದೆಲ್ಲೆಡೆ ಕರೊನಾ ವೈರಸ್ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಕೋವಿಡ್ ನಿಯಂತ್ರಣ ಮಾಡುವುದರಲ್ಲಿ ಪ್ರಾರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದರೆ, ಇತ್ತೀಚಿನ ದಿನಗಳಲ್ಲಿ ಬೆಂಗಳೂಡು ಹಾಗೂ ರಾಜ್ಯದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಲ್ಲಿ ನಾನು ಪ್ರಾರ್ಥನೆ ಮಾಡಿಕೊಳ್ಳುವುದೇನೆಂದರೆ, ಇದನ್ನು ತೊಲಗಿಸಲು...




