ಜೈಲಿನಲ್ಲಿ ಕೈದಿಗಳ ಮೋಜು ಕಾಂಗ್ರೆಸ್‌ನ 6ನೇ ಗ್ಯಾರಂಟಿ: ನಿಖಿಲ್ ಕುಮಾರಸ್ವಾಮಿ – ಕಹಳೆ ನ್ಯೂಸ್
ಕೋಲಾರ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೊ ನೋಡಿದ್ದೇನೆ. ಸರ್ಕಾರ ಯಾವ ರೀತಿ ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ಮಾತೆತ್ತಿದರೆ ಗ್ಯಾರಂಟಿ ಎನ್ನುತ್ತಾರೆ. ಕೈದಿಗಳ ಮೋಜು, ಮಸ್ತಿಗೆ ಕಾಂಗ್ರೆಸ್‌ನ ಮತ್ತೊಂದು ಗ್ಯಾರಂಟಿ ಕೊಟ್ಟಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ನಗರ ಹೊರವಲಯದಲ್ಲಿ ಮಂಗಳವಾರ ಮಂಗಮ್ಮ ಮುನಿಸ್ವಾಮಿ ಅವರ ಜನ್ಮದಿನದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, 'ಅನುದಾನ ತಾರತಮ್ಯ ಬರೀ ಜೆಡಿಎಸ್,...







