Tuesday, September 8, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಸಲಿಂಗ ಪ್ರೀತಿಗೆ ಕುಟುಂಬದ ವಿರೋಧ; ಮನನೊಂದು ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಯುವತಿಯರು – ಕಹಳೆ ನ್ಯೂಸ್

ಬೆಂಗಳೂರು: ಸಲಿಂಗ ಪ್ರೀತಿಗೆ ಕುಟುಂಬದವರು ಒಪ್ಪದ ಕಾರಣ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ  ಯಲಹಂಕದ ಶಿವನಹಳ್ಳಿಯಲ್ಲಿ  ನಡೆದಿದೆ. ಸಿರ್ಜನಾ (22) ಮತ್ತು ರೀಟಾ (23) ಮೃತ ಯುವತಿಯರು. ಇಬ್ಬರೂ ಬೆಂಗಳೂರಿನಲ್ಲಿ ಬೇರೆ ಬೇರೆ ಅಪಾರ್ಟ್‌ಮೆಂಟ್‌ಗಳಲ್ಲಿ ಮನೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಇಬ್ಬರೂ ಸಂಬಂಧಿಕರಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗುವಂತೆ ಕುಟುಂಬದಿಂದ ಒತ್ತಡವಿತ್ತು. ಆದರೆ, ಇವರಿಬ್ಬರೂ ಸಲಿಂಗಕಾಮಿಗಳಾಗಿದ್ದು ಪರಸ್ಪರ ಪ್ರೀತಿಸುತ್ತಿದ್ದರು. ಈ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಹೋಟೆಲ್‌ಗಳ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳ ದಾಳಿ; 31 ಲೀಟರ್ ಎಕ್ಸ್‌ಪೈರಿ ಹಾಲು ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಹೋಟೆಲ್‌ಗಳಲ್ಲಿ (Food Safety) ಆಹಾರದ ಗುಣಮಟ್ಟ ಮತ್ತು ಸುರಕ್ಷತೆ ಬಗ್ಗೆ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಫುಡ್ ಸೇಫ್ಟಿ ಇಲಾಖೆ (Bengaluru) ಪರಿಶೀಲನೆಗೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಬೆಂಗಳೂರಿನ ಪ್ರಸಿದ್ಧ ಖಾಸಗಿ ಹೋಟೆಲ್‌ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹೋಟೆಲ್‌ನಲ್ಲಿ ಅವಧಿ ಮೀರಿದ 31...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪತ್ನಿಗೆ ರೀಲ್ಸ್ ಹುಚ್ಚು, ಊಟ ಹಾಕದಿದ್ದಕ್ಕೆ ಕೊಲೆ; ಶವ ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಪತಿ ಲಾಕ್‌ – ಕಹಳೆ ನ್ಯೂಸ್

ಬೆಂಗಳೂರು: ಕುಂಬಳಗೋಡು ಬಳಿ ಪತ್ನಿಯನ್ನು ಕೊಲೆ ಮಾಡಿ,  ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಪ್ರಕರಣದಲ್ಲಿ  ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದಲ್ಲಿ ಸಿಕ್ಕಿಬಿದ್ದ ಧೀರಜ್ ಕುಮಾರ್ (24), ವಿಚಾರಣೆ ವೇಳೆ ಕೊಲೆಗೆ ಕಾರಣ ಏನು ಎಂಬುದನ್ನು ಬಿಚ್ಚಿಟ್ಟಿದ್ದಾನೆ. ಕುಂಬಳಗೋಡು ಗೇರುಪಾಳ್ಯದಲ್ಲಿ ಜುಲೈ 27ರಂದು ಪತ್ನಿ ರೀಮಾ ಕುಮಾರಿಯನ್ನು ಕೊಲೆ ಮಾಡಿದ್ದ ಧೀರಜ್ ಬಳಿಕ ಬಿಹಾರಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಕೆಲವು ದಿನಗಳ ನಂತರ ರೀಮಾ ಸ್ನೇಹಿತೆ ಆಕೆಗೆ ಕರೆ ಮಾಡಿದರೂ ಫೋನ್‌ ರಿಸೀವ್‌...
ಮಂಗಳೂರುರಾಜ್ಯಸುದ್ದಿ

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ; ಮುಂಬೈ ವಿಮಾನ ನಿಲ್ದಾಣದಲ್ಲಿ ಅರೆಸ್ಟ್ – ಕಹಳೆ ನ್ಯೂಸ್

ಮಂಗಳೂರು:ಕಂಕನಾಡಿ ನಗರ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈನ ಅಂಧೇರಿ ಪಶ್ಚಿಮದ ನಿವಾಸಿ ಅಶೋಕ್ ನಾರಾಯಣ್ (63)ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಾದ ದಿನದಿಂದ ಆತ ತಲೆಮರೆಸಿಕೊಂಡಿದ್ದು, ಬಂಧನದಿಂದ ತಪ್ಪಿಸಿಕೊಂಡಿದ್ದ, ಅಲ್ಲದೆ ನ್ಯಾಯಾಲಯದ ಮುಂದೆ ಹಾಜರಾಗಿರಲಿಲ್ಲ. ವಿಳಾಸ ಬದಲಾಯಿಸಿ ತಲೆಮರೆಸಿಕೊಂಡಿದ್ದ ಆತನ ವಿರುದ್ಧ ಆರೋಪ ಪಟ್ಟಿ ಹಾಕಲಾಗಿತ್ತು. ತನಿಖೆಯ ವೇಳೆ ಆರೋಪಿ ವಿದೇಶಕ್ಕೆ ಹೋಗಿದ್ದಾನೆ ಎಂದು ಪೊಲೀಸರಿಗೆ ತಿಳಿದುಬಂದಿತ್ತು. ಬಳಿಕ ಆತನ ಪಾಸ್‌ಪೋರ್ಟ್ ವಿವರಗಳನ್ನು...
ಬೆಂಗಳೂರುರಾಜ್ಯಸುದ್ದಿ

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ – ಕಹಳೆ ನ್ಯೂಸ್

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಥಾರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ  ತಾಲೂಕಿನ ಕಂಬಾಳು  ಗ್ರಾಮದ ಬಳಿ ನಡೆದಿದೆ. ಪವನ್, ದೀಪಕ್ ಮೃತರು. ಕಳೆದ ರಾತ್ರಿ ಸ್ನೇಹಿತನ ಹುಟ್ಟುಹಬ್ಬ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕೆರೆಯ ರಸ್ತೆಯಿಂದ ಚಾಲಕನ ನಿಯಂತ್ರಣ ತಪ್ಪಿ ಥಾರ್‌ ಜೀಪ್‌ ಗದ್ದೆಗೆ ಬಿದ್ದಿದೆ. ರಸ್ತೆಯಿಂದ ನಾಲ್ಕೈದು ಬಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ರಾತ್ರೋರಾತ್ರಿ ಲೇಡಿಸ್‌ ಪಿಜಿಗೆ ನುಗ್ಗಿದ ಕಳ್ಳ; ಲ್ಯಾಪ್‌ಟಾಪ್‌, ಸ್ಮಾರ್ಟ್‌ವಾಚ್ ಕದ್ದು ಪರಾರಿ – ಕಹಳೆ ನ್ಯೂಸ್

ಬೆಂಗಳೂರು: ಕೋರಮಂಗಲದಲ್ಲಿ ರಾತ್ರಿ ವೇಳೆ ಮಹಿಳೆಯರ ಪಿಜಿಗೆ  ನುಗ್ಗಿದ ಅಪರಿಚಿತ ವ್ಯಕ್ತಿ, ಯಾರಿಗೂ ಗೊತ್ತಾಗದಂತೆ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿದ್ದಾನೆ. ಈ ಘಟನೆ ಜುಲೈ 30ರಂದು ಕೋರಮಂಗಲದ ನೆಕ್ಸಸ್ ಮಾಲ್ ಸಮೀಪದ ಮಹಿಳೆಯರ ಪಿಜಿಯಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಮುಖ್ಯ ದ್ವಾರದ ಮೂಲಕ ಪಿಜಿಯೊಳಗೆ ಪ್ರವೇಶಿಸಿದ್ದಾನೆ. ಪಿಜಿಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಕಳ್ಳ, ಅಲ್ಲಿದ್ದ ಲ್ಯಾಪ್‌ಟಾಪ್‌, ಸ್ಮಾರ್ಟ್‌ವಾಚ್ ಸೇರಿದಂತೆ ಹಲವು ಬೆಲೆಬಾಳುವ ವಸ್ತುಗಳನ್ನು ಕದ್ದು ಸ್ಥಳದಿಂದ ಪರಾರಿಯಾಗಿದ್ದಾನೆ. ಕಳ್ಳತನದ ವಿಷಯ ತಿಳಿಯುತ್ತಿದ್ದಂತೆ...
ರಾಜ್ಯಸುದ್ದಿ

ಡಿವೋರ್ಸ್‌ ಬಳಿಕ ಖಿನ್ನತೆ; 5ನೇ ಮಹಡಿಯಿಂದ ಹಾರಿ ಮನೋವೈದ್ಯೆ ಆತ್ಮಹತ್ಯೆ – ಕಹಳೆ ನ್ಯೂಸ್

ಲಕ್ನೋ: ಪತಿಯಿಂದ ವಿಚ್ಛೇದನ ಪಡೆದ ಬಳಿಕ ಖಿನ್ನತೆ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗಿ ಮನೋವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಘಟನೆ ನಡೆದಿದೆ. 40 ವರ್ಷದ ಮನೋವೈದ್ಯೆ ಡಾ. ಹೆಮಿಕಾ ಅಗರ್ವಾಲ್ ಮೃತ ದುರ್ದೈವಿ. ಡಿವೋರ್ಸ್‌ ಪಡೆದ ಬಳಿಕ ಖಿನ್ನತೆಗೆ ಒಳಗಾಗಿದ್ದ ಅವರು ತಮ್ಮ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯಿಂದ ದೂರವಾಗಿದ್ದಕ್ಕೆ ಮನನೊಂದು ಈ ರೀತಿ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ತರು ತಿಳಿಸಿದ್ದಾರೆ. ಭಾನುವಾರ ರಾಜ್...
ಜಿಲ್ಲೆರಾಜ್ಯಶಿವಮೊಗ್ಗಸುದ್ದಿ

ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ ನಿವೃತ್ತ ಇಂಜಿನಿಯರ್ ಸಾವು – ಕಹಳೆ ನ್ಯೂಸ್

ಶಿವಮೊಗ್ಗ: ನಗರದ ದತ್ತಾತ್ರೇಯ ಸ್ವಾಮಿ ದೇವಸ್ಥಾನದ ಲಿಫ್ಟ್‌ನಲ್ಲಿ  ಸಿಲುಕಿ ಅಸ್ವಸ್ಥಗೊಂಡಿದ್ದ ನಿವೃತ್ತ ಇಂಜಿನಿಯರ್ ಸಾವನ್ನಪ್ಪಿದ್ದಾರೆ. ಕುಮಾರಸ್ವಾಮಿ (80) ಸಾವಿಗೀಡಾದ ನಿವೃತ್ತ ಇಂಜಿನಿಯರ್. ಭಾನುವಾರ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಲಿಫ್ಟ್‌ನಲ್ಲಿ ಮೇಲೆ ತೆರಳಲು ಬಟನ್ ಒತ್ತಿ ಒಳಹೋದಾಗ, ಮೇಲಿಂದ ಬಂದ ಲಿಫ್ಟ್‌ನಲ್ಲಿ ಅವರು ಸಿಲಿಕಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಅವರನ್ನು ರಕ್ಷಿಸಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ...
1 5 6 7 8 9 319
Page 7 of 319