Tuesday, March 17, 2026

ರಾಜ್ಯ

ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಆಗಸ್ಟ್ 18ರಂದು ಚೀನಾದ ‘ವಿದೇಶಾಂಗ ಸಚಿವ ವಾಂಗ್ ಯಿ’ ಭಾರತಕ್ಕೆ ಆಗಮನ -ಕಹಳೆ ನ್ಯೂಸ್

ನವದೆಹಲಿ : ಹಿಮಾಲಯದಲ್ಲಿನ ವಿವಾದಿತ ಗಡಿ ಕುರಿತು ಮಾತುಕತೆ ನಡೆಸಲು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಆಗಸ್ಟ್ 18-20 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಆಗಸ್ಟ್ 16 ರಂದು ಹೇಳಿಕೆಯಲ್ಲಿ ತಿಳಿಸಿದೆ. ನವದೆಹಲಿಯ ಆಹ್ವಾನದ ಮೇರೆಗೆ ವಾಂಗ್ ಚೀನಾ ಮತ್ತು ಭಾರತದ ವಿಶೇಷ ಪ್ರತಿನಿಧಿಗಳ ನಡುವೆ ಗಡಿ ಪ್ರಶ್ನೆಯ ಕುರಿತು 24 ನೇ ಸುತ್ತಿನ ಮಾತುಕತೆ ನಡೆಸಲಿದ್ದಾರೆ. 2020 ರಲ್ಲಿ ಗಡಿಯಲ್ಲಿ ಭಾರತ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ -ಕಹಳೆ ನ್ಯೂಸ್

ಬೆಂಗಳೂರು: ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ದುರಂತದಲ್ಲಿ ಸಜೀವ ದಹನವಾದ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ‘ಸಿಲಿಂಡರ್’ ಸ್ಪೋಟಕ್ಕೆ 6 ಮನೆಗಳು ಛಿದ್ರ ಛಿದ್ರ, 12 ಮಂದಿಗೆ ಗಂಭೀರ ಗಾಯ, -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟಗೊಂಡು 6 ಮನೆಗಳು ಛಿದ್ರ ಛಿದ್ರವಾಗಿದ್ದು, ಓರ್ವ ಬಾಲಕ ಮೃತಪಟ್ಟು 12 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಚಿನ್ನಯ್ಯಪಾಳ್ಯದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಒಂದು ಸಿಲಿಂಡರ್ ಸ್ಪೋಟಕ್ಕೆ 10 ಮನೆಗಳು ಛಿದ್ರ ಛಿದ್ರವಾಗಿದೆ ಎನ್ನಲಾಗಿದೆ .ಸಿಲಿಂಡರ್ ಸ್ಪೋಟಕ್ಕೆ ಓರ್ವ ಮಹಿಳೆಯ ಕಾಲು ಕೂಡ ಕಟ್ ಆಗಿದೆ. ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಮುಬಾರಕ್ (8) ಮೃತಪಟ್ಟಿದ್ದಾನೆ. 12 ಮಂದಿ ಗಾಯಗೊಂಡು...
ಜಿಲ್ಲೆದೆಹಲಿರಾಜ್ಯಸುದ್ದಿ

ಸತತ 12ನೇ ಸ್ವಾತಂತ್ರ್ಯೋತ್ಸವದಂದು ಭಾಷಣ: ಇಂದಿರಾ ಗಾಂಧಿ ದಾಖಲೆ ಮುರಿದ ಪಿಎಂ ಮೋದಿ -ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಕೆಂಪುಕೋಟೆ ಬಳಿ ಸತತ 12ನೇ ಸಲ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪಿಎಂ, ದಿವಂಗತ ಇಂದಿರಾ ಗಾಂಧಿ ಅವರ ದಾಖಲೆಯನ್ನು ಮುರಿದಿದ್ದಾರೆ. ಇದರೊಂದಿಗೆ, ಸತತವಾಗಿ ಹೆಚ್ಚು ಸಲ ಸ್ವಾತಂತ್ರ್ಯೋತ್ಸವದಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿಗಳ ಸಾಲಿನಲ್ಲಿ ಜವಾಹರಲಾಲ್‌ ನೆಹರೂ ನಂತರದ ಸ್ಥಾನಕ್ಕೆ ಏರಿದ್ದಾರೆ. ಇಂದಿರಾ ಅವರು, 1966ರ ಜನವರಿಯಿಂದ 1977ರ ಮಾರ್ಚ್‌ ವರೆಗೆ ಹಾಗೂ 1980ರ ಜನವರಿಯಿಂದ 1984ರ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

79ನೇ ಸ್ವಾತಂತ್ರ್ಯ ದಿನಾಚರಣೆ : ನಾಡಿನ ಜನತೆಗೆ `CM ಸಿದ್ದರಾಮಯ್ಯ’ ಸಂದೇಶ.- ಕಹಳೆ ನ್ಯೂಸ್

ಬೆಂಗಳೂರು : ದೇಶಾದ್ಯಂತ ಇಂದು 79 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಇಂದು ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದು, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಂದೇಶ ನೀಡಿದ್ದಾರೆ. ಇಂದು ಭಾರತವು ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಮುಕ್ತಗೊಂಡ ಶುಭದಿನ. ಮಹಾತ್ಮ ಗಾಂಧೀಜಿ, ಜವಾಹರಲಾಲ್‌ ನೆಹರು, ಸರ್ದಾರ್‌ ವಲ್ಲಭಭಾಯಿ ಪಟೇಲ್, ಸುಭಾಷ್‌ ಚಂದ್ರ ಬೋಸ್, ಮೌಲಾನಾ ಅಬುಲ್‌ ಕಲಾಂ ಅಜಾದ್‌ ಮುಂತಾದ‌ ಕೆಚ್ಚೆದೆಯ ಅಪ್ರತಿಮ...
ಜಮ್ಮು ಮತ್ತು ಕಾಶ್ಮೀರಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟ; 12 ಮೃತದೇಹಗಳು ಪತ್ತೆ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ -ಕಹಳೆ ನ್ಯೂಸ್

ಜಮ್ಮು: ಗುರುವಾರ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಮಚೈಲ್ ಮಾತಾ ಯಾತ್ರೆಯ ಮಾರ್ಗಮಧ್ಯೆಯ ದೂರದ ಹಳ್ಳಿಯಲ್ಲಿ ಸಂಭವಿಸಿದ ಭಾರಿ ಮೇಘಸ್ಫೋಟದಲ್ಲಿ ಕನಿಷ್ಠ 12 ಜನರು ಸಾವಿಗೀಡಾಗಿದ್ದು, ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯಕ್ಕೆ ಹೋಗುವ ಮಾರ್ಗಮಧ್ಯೆ ವಾಹನ ಸಂಚಾರಕ್ಕೆ ಯೋಗ್ಯವಾದ ಕೊನೆಯ ಗ್ರಾಮವಾದ ಚಸೋಟಿಯಲ್ಲಿ ಮೇಘಸ್ಫೋಟ ಸಂಭವಿಸಿದೆ. ಘಟನೆಯ ನಂತರ ದೇವಾಲಯಕ್ಕೆ ವಾರ್ಷಿಕ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ಈಗ ಪರಿಸ್ಥಿತಿಯ ಮೇಲೆ ಸಂಪೂರ್ಣವಾಗಿ ಗಮನಹರಿಸಿದ್ದಾರೆ. ದೊಡ್ಡ ಪ್ರಮಾಣದ...
ಜಿಲ್ಲೆದೆಹಲಿರಾಜ್ಯಸುದ್ದಿ

‘ಆಪರೇಷನ್ ಸಿಂಧೂರ’ದಲ್ಲಿ ಭಾಗಿಯಾದ ಬಿಎಸ್‌ಎಫ್‌ನ 16 ಸಿಬ್ಬಂದಿಗೆ ಶೌರ್ಯ ಪದಕ -ಕಹಳೆ ನ್ಯೂಸ್

ನವದೆಹಲಿ: ಭಾರತೀಯ ಸೇನೆ ನಡೆಸಿದ 'ಆಪರೇಷನ್‌ ಸಿಂಧೂರ' ಕಾರ್ಯಾಚರಣೆಯಲ್ಲಿ ಭಾಗವಹಿಸಿ 'ಸಾಟಿಯಿಲ್ಲದ ಶೌರ್ಯ' ಪ್ರದರ್ಶಿಸಿದ್ದ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) 16 ಮಂದಿಗೆ ಕೇಂದ್ರ ಸರ್ಕಾರ ಶೌರ್ಯ ಪದಕ ಘೋಷಿಸಿದೆ. ಗಡಿಯಲ್ಲಿ ದೇಶ ರಕ್ಷಣೆ ಮಾಡುವ ಹೊಣೆಯನ್ನು ಬಿಎಸ್‌ಎಫ್‌ ನಿಭಾಯಿಸುತ್ತಿದೆ. 'ಆಪರೇಷನ್‌ ಸಿಂಧೂರದ ವೇಳೆ ಗಮನಾರ್ಹ, ಅಚಲ ಪರಾಕ್ರಮ, ಅಪ್ರತಿಮ ಸಾಹಸ ತೋರಿದ್ದಕ್ಕಾಗಿ ಗಡಿ ರಕ್ಷಣಾ ಪಡೆಯ 16 ಯೋಧರಿಗೆ ಈ ಸ್ವಾತಂತ್ರ್ಯೋತ್ಸವದಂದು ಶೌರ್ಯ ಪದಕ ನೀಡಲಾಗುತ್ತಿದೆ' ಎಂದು ಬಿಎಸ್‌ಎಫ್‌...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ರಾಜ್ಯದಲ್ಲಿ ಮುಂಗಾರು ಅಬ್ಬರ – ಮುಂದಿನ 4 ದಿನ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಲ್ಲಿ ಇನ್ನೂ ಎರಡು ದಿನ ಮೋಡ ಕವಿದ ವಾತಾವರಣದ ಜೊತೆ ತುಂತುರು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಹೀಗಾಗಿ ಮಳೆಯ ಜೊತೆ ಚುಮುಚುಮು ಚಳಿಯ ಅನುಭವ ಇರಲಿದೆ....
1 74 75 76 77 78 273
Page 76 of 273