Wednesday, March 18, 2026

ರಾಜ್ಯ

ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ದಕ್ಷಿಣ ಕನ್ನಡ ಸೇರಿ ಪಶ್ಚಿಮಘಟ್ಟಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಪಿಎಂಜಿಎಸ್ವೈ-IV ಅನುಷ್ಠಾನಕ್ಕೆ ಹಲವು ಸವಾಲು ; ಭೌಗೋಳಿಕ ನೆಲೆಯಲ್ಲಿ ಮಾರ್ಗಸೂಚಿ ರೂಪಿಸುವಂತೆ ಸಂಸದ ಕ್ಯಾ. ಚೌಟ ಲೋಕಸಭೆಯಲ್ಲಿ ಪ್ರಸ್ತಾಪ -ಕಹಳೆ ನ್ಯೂಸ್

ನವದೆಹಲಿ: ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ(PMGSY)ಗೆ ನಿಗದಿಪಡಿಸಿರುವ ಮಾನದಂಡ/ ಮಾರ್ಗಸೂಚಿಗಳಲ್ಲಿ ತಿದ್ದುಪಡಿ ತಂದು ಈ ಯೋಜನೆ ಅನುಷ್ಠಾನಕ್ಕೆ ಎದುರಾಗಿರುವ ಸವಾಲು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಂಸತ್ತಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವಾಲಯವನ್ನು ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿ ಈ ಮಹತ್ವದ ವಿಷಯ ಪ್ರಸ್ತಾಪಿಸಿರುವ ಅವರು, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ...
ಜಿಲ್ಲೆರಾಜ್ಯಸುದ್ದಿ

ಬಾಗಲಕೋಟೆಯ ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಿದ ಕ್ರಿಕೆಟಿಗ ರಿಷಭ್‌ ಪಂತ್ -ಕಹಳೆ ನ್ಯೂಸ್

ಬಾಗಲಕೋಟೆ: ಟೀಮ್‌ ಇಂಡಿಯಾದ ಸ್ಟಾರ್‌ ಬ್ಯಾಟರ್‌ - ವಿಕೆಟ್‌ ಕೀಪರ್‌ ರಿಷಭ್‌ ಪಂತ್  ಮೈದಾನದಲ್ಲಿ ಅಬ್ಬರದ ಆಟದ ಮೂಲಕ ಮಿಂಚಿದವರು. ಎಷ್ಟೋ ಪಂದ್ಯದಲ್ಲಿ ತಂಡದ ಗೆಲುವಿಗೆ ರೂವಾರಿಯಾದ ಆಟಗಾರ. ನಿಜ ಜೀವನದಲ್ಲಿ ಪಂತ್‌ ಮಾನವೀಯ ಕಾರ್ಯವೊಂದನ್ನು ಮಾಡಿ ʼಹೀರೋʼ ಎನ್ನಿಸಿಕೊಂಡಿದ್ದಾರೆ. ಕರ್ನಾಟಕದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಪಂತ್‌ ಆರ್ಥಿಕವಾಗಿ ಸಹಾಯ ಮಾಡಿದ್ದು, ಆ ಮೂಲಕ ಸಮಾಜಕ್ಕೆ ಮಾದರಿ ಆಗಿದ್ದಾರೆ. ಬಾಗಲಕೋಟೆ ತಾಲೂಕಿನ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ್ ಎನ್ನುವ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ.ಕೆ ಆರ್‌ ನಗರದ ಮನೆಗೆಲಸದವಳ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿ ಶುಕ್ರವಾರ ದೋಷಿ ಎಂದು ಪ್ರಕಟಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಮಧ್ಯಾಹ್ನ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. ನ್ಯಾಯಮೂರ್ತಿ ಗಜಾನನ ಭಟ್‌ ಅವರು ಈ ಆದೇಶ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n) ಮತ್ತು 376(2)(k) ಅಡಿಯಲ್ಲಿ ಆರೋಪಗಳು ದಾಖಲಾಗಿದೆ. ಈ ಕಲಂಗಳು...
ಜಿಲ್ಲೆರಾಜ್ಯಸುದ್ದಿಹೆಚ್ಚಿನ ಸುದ್ದಿ

ವಾರಣಾಸಿಯಲ್ಲಿ ₹2,183 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ -ಕಹಳೆ ನ್ಯೂಸ್

ವಾರಣಾಸಿ: ವಾರಣಾಸಿಯಲ್ಲಿ ₹2,183 ಕೋಟಿ ವೆಚ್ಚದ 52 ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೆರವೇರಿಸಿದ್ದಾರೆ. ವಾರಣಾಸಿ ಸಮೀಪದ ಸೇವಾಪುರಿ ಬ್ಲಾಕ್‌ನಲ್ಲಿರುವ ಬನೌಲಿ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 'ವಾರಣಾಸಿಯ ಎಲ್ಲಾ ಕುಟುಂಬಗಳಿಗೂ ನನ್ನ ನಮಸ್ಕಾರಗಳು..' ಎಂದು ಪ್ರಧಾನಿ ಮೋದಿ ಅವರು ಭಾಷಣ ಆರಂಭಿಸಿದ್ದಾರೆ. ರಸ್ತೆ ನಿರ್ಮಾಣ, ಆರೋಗ್ಯ, ಶಿಕ್ಷಣ, ಕ್ರೀಡೆ, ಪ್ರವಾಸೋದ್ಯಮ ಹಾಗೂ ನಗರಾಭಿವೃದ್ದಿ ಸೇರಿದಂತೆ 52 ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇದೇ...
ಜಿಲ್ಲೆದೆಹಲಿರಾಜ್ಯಸುದ್ದಿ

ಸುಹಾಸ್‌ ಶೆಟ್ಟಿ ಹತ್ಯೆ ಎನ್‌ಐಎಗೆ ಹಸ್ತಾಂತರ; ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ ; ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದರಿಂದ ಮನವಿ -ಕಹಳೆ ನ್ಯೂಸ್

ದೆಹಲಿ : ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್‌ಗಳ ಆತಂಕದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ(NIA)ದ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ದೆಹಲಿಯಲ್ಲಿ ಸಚಿವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಸಂಸದರು, ಮಂಗಳೂರು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮಳೆಯಬ್ಬರ ಹೆಚ್ಚಿದ್ದು, ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಭಾರೀ ಮಳೆ ಹಿನ್ನೆಲೆ ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಗರ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ನೆಲೆಸಿದ ಒಟ್ಟು 8 ವಿದೇಶಿ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನೈಜೀರಿಯಾದ ನಾಲ್ವರು ಪ್ರಜೆಗಳು, ಘಾನಾದ ಇಬ್ಬರು ಪ್ರಜೆಗಳು, ಸುಡಾನ್ ದೇಶದ ಓರ್ವ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ವಿದೇಶಿಗರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ 9 ಪ್ರಜೆಗಳನ್ನು ಸ್ವದೇಶಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಸುತ್ತಿದ್ದು ಆರೋಪಿಗಳನ್ನು ಡಿಟೆನ್ಷನ್ ಸೆಂಟರ್ ನಲ್ಲಿ ಇರಿಸಲಾಗಿದೆ....
ಜಿಲ್ಲೆದೆಹಲಿರಾಜ್ಯಸುದ್ದಿ

34 ಮೀನುಗಾರರ ಬಿಡುಗಡೆಗಾಗಿ ಬಾಂಗ್ಲಾದೇಶಕ್ಕೆ ಭಾರತ ಒತ್ತಾಯ -ಕಹಳೆ ನ್ಯೂಸ್

ನವದೆಹಲಿ: ಅಂತರರಾಷ್ಟ್ರೀಯ ಸಮುದ್ರ ಗಡಿ ರೇಖೆ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ ಬಾಂಗ್ಲಾದೇಶ ವಶಕ್ಕೆ ಪಡೆದಿರುವ 34 ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವಂತೆ ಭಾರತ ಒತ್ತಾಯಿಸಿದೆ. ಜುಲೈ 14 ಮತ್ತು 15ರಂದು ಬಾಂಗ್ಲಾದೇಶವು ಒಟ್ಟು 34 ಭಾರತೀಯ ಮೀನುಗಾರರನ್ನು ಮತ್ತು ಅವರಿಗೆ ಸೇರಿದ ಎರಡು ದೋಣಿಗಳನ್ನು ವಶಕ್ಕೆ ಪಡೆದಿದೆ. ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿ, ಈ ವಿಷಯವನ್ನು ಅಲ್ಲಿನ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಮೀನುಗಾರರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ'...
1 77 78 79 80 81 273
Page 79 of 273