Wednesday, March 18, 2026

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಹರಿಹರಪುರದ ಪರಮಪೂಜ್ಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಬೆಂಗಳೂರಿನಲ್ಲಿ 25ನೇ ಚಾತುರ್ಮಾಸ್ಯ ವೃತಾಚರಣೆ – ಕಹಳೆ ನ್ಯೂಸ್

ಬೆಂಗಳೂರು : ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀ ನೃಸಿಂಹ ಪೀಠಮ್, ಶ್ರೀಮಠ, ಹರಿಹರಪುರದ ಪರಮಪೂಜ್ಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿರವರ 25ನೇ ಚಾತುರ್ಮಾಸ್ಯ ವ್ರತವು ಇಂದು ಬೆಂಗಳೂರಿನ ಜಯನಗರ 2ನೇ ಬ್ಲಾಕಿನಲ್ಲಿರುವ ಶ್ರೀ ಕೊಂಡರಾಮ ದೇವಸ್ಥಾನದಲ್ಲಿ ಆರಂಭವಾಯಿತು. ಸಾವಿರಾರು ವರ್ಷಗಳ ಭವ್ಯವಾದ ಇತಿಹಾಸ ಮತ್ತು ಶ್ರೇಷ್ಠವಾದ ಗುರು ಪರಂಪರೆಯನ್ನು ಈ ಧರ್ಮಪೀಠವು ಹೊಂದಿದೆ. ಈ ಧರ್ಮಪೀಠದ ಪ್ರಸ್ತುತ 25ನೇ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀಮದ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ಮುಡಾ ಹಗರಣ’ ಕೇಸ್ : ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ.! -ಕಹಳೆ ನ್ಯೂಸ್

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆದಿದೆ. ಸಿಎಂ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆ ನೋಟಿಸ್ ಜಾರಿಗೊಳಿಸಲು ಕೋರ್ಟ್ ಆದೇಶ ಹೊರಡಿಸಿದೆ. ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಮನೆಗೆ ನುಗ್ಗಿ 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು -ಕಹಳೆ ನ್ಯೂಸ್

ಬೆಂಗಳೂರು ದಕ್ಷಿಣ: ಮನೆಗೆ ನುಗ್ಗಿದ ದುಷ್ಕರ್ಮಿಗಳು 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರಕೆರೆ ಬಳಿ ನಡೆದಿದೆ. ಅರುಣಾ (14) ಕೊಲೆಯಾದ ಬಾಲಕಿ. ಮನೆಯಲ್ಲಿ ತಂದೆ-ತಾಯಿ ಯಾರೂ ಇರದಿದ್ದ ವೇಳೆ ಏಕಾಏಕಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ. ಯಾವ ಕಾರಣಕ್ಕಾಗಿ ಬಾಲಕಿ ಹತ್ಯೆ ನಡೆದಿದೆ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ. ಪೋಷಕರು ಮನೆಗೆ ಬಂದು ನೋಡುವಷ್ಟರಲ್ಲಿ ಮಗಳು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೊರೊನಾ ಬಂದವರಲ್ಲೇ ಹೆಚ್ಚು ಹೃದಯಾಘಾತ; ಆರೋಗ್ಯ ಸಚಿವರ ಶಾಕಿಂಗ್ ಮಾಹಿತಿ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸಾಲು ಸಾಲು ಹೃದಯಾಘಾತ ಪ್ರಕರಣಗಳು ದಾಖಲಾಗಿವೆ. ಹಾಸನ, ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಲು ಸಾಲು ಹೃದಯಾಘಾತ ಪ್ರಕರಣಗಳಿಂದ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಹೃದಯಾಘಾತಕ್ಕೆ ಸಂಬಂಧಿಸಿದ ವರದಿ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಹೃದಯಾಘಾತ ಪ್ರಕರಣ ಹೆಚ್ಚಾಗುತ್ತಿರುವುದಕ್ಕೆ ಸ್ಪೋಟಕ ಮಾಹಿತಿಯನ್ನ ನೀಡಿದ್ದಾರೆ. ಈ ಕುರಿತು ಆರೋಗ್ಯ ಸಚಿವರಾದ ದಿನೇಶ್‌...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸಚಿವ ಎಂ.ಬಿ.ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು -ಕಹಳೆ ನ್ಯೂಸ್

ಬೆಂಗಳೂರು - ಭೂಸ್ವಾಧೀನ ಪ್ರಕ್ರಿಯೆ ಹಾಗೂ ಅಲ್ಲಿನ ರೈತರ ಹೋರಾಟಕ್ಕೆ ಸಂಬಂಧಪಟ್ಟಂತೆ ಮತ್ತೊಮ್ಮೆ ಪ್ರತಿಕ್ರಿಯಿಸಿರುವ ಬಹುಭಾಷಾ ನಟ ಪ್ರಕಾಶ್ ರೈ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ. ದೇವನಹಳ್ಳಿಯ ಹೋರಾಟದ ಬದಲಾಗಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್‌ ಗೆ ಹೋಗಿ ರೈತರ ಪರವಾಗಿ ಹೋರಾಟ ಮಾಡಲಿ ಎಂದು ಸಚಿವ ಪಾಟೀಲ್‌ರು ನನ್ನ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾನು ಅಲ್ಲೆಲ್ಲಾ ಹೋರಾಟಕ್ಕೂ ಬೆಂಬಲ ನೀಡಿದ್ದೇನೆ. ತಮಿಳುನಾಡಿನ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಶ್ಲೀ*ಲ ಮೆಸೇಜ್‌ ಮಾಡಿದ್ದಕ್ಕೆ ಯುವಕನ ಕಿಡ್ನಾಪ್:‌ ರೇಣುಕಾಸ್ವಾಮಿ ಹೆಸರು ಹೇಳಿ ಹಲ್ಲೆ – ಕಹಳೆ ನ್ಯೂಸ್

ನೆಲಮಂಗಲ (ಬೆಂಗಳೂರು ಗ್ರಾಮಾಂತರ): ಅಶ್ಲೀ*ಲ ಮೆಸೇಜ್‌ ಮಾಡಿದ್ದಕ್ಕಾಗಿ ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಕೊ*ಲೆ ಮಾಡಲಾಗಿತ್ತು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಅದೇ ಮಾದರಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಯುವತಿಯ ವಿಚಾರಕ್ಕೆ ಗುಂಪೊಂದು ಕುಶಾಲ್‌ ಎನ್ನುವ ಯುವಕನನ್ನು ಕಿಡ್ನಾಪ್‌ ಮಾಡಿ ಹಿಗ್ಗಾಮುಗ್ಗಾವಾಗಿ ಥಳಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ...
ಕೇರಳಜಿಲ್ಲೆರಾಜ್ಯಸುದ್ದಿ

ದೇಗುಲಗಳಲ್ಲಿ ಗೋಶಾಲೆ, ಧರ್ಮಬೋಧನಾ ಸಂಸ್ಥೆ, ಆಸ್ಪತ್ರೆ ಅಗತ್ಯ: ಕೇರಳ ರಾಜ್ಯಪಾಲ – ಕಹಳೆ ನ್ಯೂಸ್

ಕಣ್ಣೂರು : ಕೇರಳದ ಪ್ರತಿಯೊಂದು ದೇವಾಲಯದಲ್ಲಿ ಗೋಶಾಲೆ, ಸನಾತನ ಧರ್ಮವನ್ನು ಬೋಧಿಸುವ ಸಂಸ್ಥೆ ಮತ್ತು ಆಸ್ಪತ್ರೆಯನ್ನು ಸ್ಥಾಪಿಸಲು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಕರೆ ನೀಡಿದ್ದಾರೆ. ದೇವಸ್ವಂ ಮಂಡಳಿಗಳು ಇದನ್ನು ಕಾರ್ಯಗತಗೊಳಿಸಬಹುದು ಎಂದು ಸೂಚಿಸಿದ್ದಾರೆ. ತಲಿಪರಂಬದ ಶ್ರೀ ರಾಜರಾಜೇಶ್ವರ ದೇವಸ್ಥಾನದಲ್ಲಿ ಶಿವನ ಕಂಚಿನ ವಿಗ್ರಹವನ್ನು ಅನಾವರಣಗೊಳಿಸಿದ ನಂತರ ಮಾತನಾಡಿದ ಅರ್ಲೇಕರ್, ಎಲ್ಲ ದೇವಾಲಯಗಳಲ್ಲಿ ವೈದ್ಯಕೀಯ ಸೌಲಭ್ಯಗಳು ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಿದ್ದಾರೆ. ಬೀದಿಗಳಲ್ಲಿ ಅಲೆದಾಡುವ ಎಲ್ಲ ಜಾನುವಾರುಗಳನ್ನು ಪೋಷಿಸಲು...
ಜಿಲ್ಲೆರಾಜ್ಯಸುದ್ದಿ

ಕಾಲೇಜಿನಲ್ಲೇ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾ*ಚಾರ. ಸಿಬ್ಬಂದಿ ಸೇರಿ ಮೂವರ ಬಂಧನ – ಕಹಳೆ ನ್ಯೂಸ್

ಕೊಲ್ಕತ್ತಾ: ಕಾಲೇಜಿನಲ್ಲೇ ಕಾನೂನು ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾಲೇಜು ಸಿಬ್ಬಂದಿ ಸೇರಿ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ. ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿರುವ ಕಾನೂನು ಕಾಲೇಜಿನಲ್ಲಿ ಕಳೆದ ಜೂನ್ 25 ರಂದು ಸಂಜೆ 7.30 ರಿಂದ ರಾತ್ರಿ 10.50 ರ ನಡುವೆ ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ದೂರು ದಾಖಲಿಸಿಕೊಂಡ ಪೊಲೀಸರು...
1 79 80 81 82 83 273
Page 81 of 273