ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು : ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ – ಕಹಳೆ ನ್ಯೂಸ್
ಇಟಾನಗರ: ಅರುಣಾಚಲ ಪ್ರದೇಶದ ಪಾಸಿಘಾಟ್‌ನ ಮೆಬೊ ಮತ್ತು ಸಿಗರ್ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಭಾರತೀಯ ವಾಯುಪಡೆ 66,000 ಲೀಟರ್ ನೀರನ್ನು ಬಳಸಿದೆ. ಬೆಂಕಿ ನಂದಿಸಲು ಭಾರತೀಯ ವಾಯುಪಡೆ (ಐಎಎಫ್) ಮಂಗಳವಾರ ಮಿ -17 ವಿ 5 ಹೆಲಿಕಾಪ್ಟರ್‌ನ್ನು ನಿಯೋಜಿಸಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆಯ ಫೋಟೋ ಹಾಗೂ ವಿಡಿಯೋವನ್ನು ವಾಯುಪಡೆ ಎಕ್ಸ್‌ನಲ್ಲಿ ಹಂಚಿಕೊಂಡಿದೆ. Mi-17 V5 ಹೆಲಿಕಾಪ್ಟರ್ ಬೆಂಕಿ ನಂದಿಸುವ ಕಾರ್ಯಾಚರಣೆಯ ವೀಡಿಯೋವನ್ನು ವಾಯುಪಡೆ...







