Sunday, June 14, 2026

ರಾಷ್ಟ್ರೀಯ

ಮುಂಬೈರಾಜ್ಯಸುದ್ದಿ

ಶಾಲಾ-ಕಾಲೇಜು ತೆರೆಯಲು 8 ಎಕರೆ ಜಾಗ ಖರೀದಿಸಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ ಆರೋಪಿ -ಕಹಳೆ ನ್ಯೂಸ್

ಮುಂಬೈ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತನಾಗಿರುವ ರೇಣುಕೈ ಕೆಮಿಸ್ಟ್ರಿ ಕ್ಲಾಸಸ್ (ಆರ್‍ಸಿಸಿ) ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್ 8 ಎಕರೆ ಜಾಗದಲ್ಲಿ ಶಾಲೆ ಹಾಗೂ ಕಾಲೇಜು ಆರಂಭಿಸಲು ಮುಂದಾಗಿದ್ದ ವಿಚಾರ ಬಹಿರಂಗವಾಗಿದೆ. ಸಿಬಿಐ ಬಂಧನದ ಬಳಿಕ ಮೋಟೆಗಾಂವ್ಕರ್ ಆಸ್ತಿ ಹಾಗೂ ಹಣದ ಮೂಲದ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬಂದಿವೆ. ಮೋಟೆಗಾಂವ್ಕರ್ ನಡೆಸುತ್ತಿದ್ದ ಆರ್‍ಸಿಸಿ ಕೋಚಿಂಗ್ ಸಂಸ್ಥೆ ಮಹಾರಾಷ್ಟ್ರದ ಸುತ್ತಲೂ ಜನಪ್ರಿಯತೆ ಪಡೆದಿದ್ದು, ಲಾತೂರ್ ಸೇರಿ ಒಟ್ಟು 9 ಶಾಖೆಗಳಿವೆ....
ಬೆಂಗಳೂರುರಾಜ್ಯಸುದ್ದಿ

ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಪಾಗಲ್‌ ಪ್ರೇಮಿ -ಕಹಳೆ ನ್ಯೂಸ್

ಬೆಂಗಳೂರು: ಹುಡುಗಿ ಕೈಕೊಟ್ಟಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ  ಹೈಟೆನ್ಷನ್ ಕಂಬ   ಏರಿದ ಘಟನೆ ಆನೇಕಲ್  ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ. ಸೋಮಶೇಖರ್ ಹೈಟೆನ್ಷನ್ ಕಂಬ ಹತ್ತಿದ ಲವರ್ ಬಾಯ್. ಚಿನ್ನಯ್ಯನಪಾಳ್ಯ ನಿವಾಸಿಯಾದ ಸೋಮಶೇಖರ್ ಕಳೆದ ಮೂರು ವರ್ಷಗಳಿಂದ ಯುವತಿಯನ್ನ ಪ್ರೀತಿಸುತ್ತಿದ್ದ. ಇತ್ತೀಚಿಗೆ ಯುವತಿ ಮದುವೆಗೆ ನಿರಾಕರಿಸಿದ್ದಾಳೆ. ಲವ್ ಬ್ರೇಕಪ್ ಮಾಡಿಕೊಳ್ಳಲು ಯುವತಿ ಮುಂದಾದ ಹಿನ್ನೆಲೆ ಸೋಮಶೇಖರ್ ಮನೆಯ ಶೀಟ್ ಹೊಡೆದು ದಾಂಧಲೆ ಮಾಡಿದ್ದಾನೆ. ಬಳಿಕ ಮನೆ ಸಮೀಪದ ಹೈಟೆನ್ಷನ್ ಕಂಬ ಹತ್ತಿ ಹುಡುಗಿ...
ಬೆಂಗಳೂರುರಾಜ್ಯಸುದ್ದಿ

ಇಂದು ದೇಶಾದ್ಯಂತ ಮೆಡಿಕಲ್ ಶಾಪ್‍ಗಳು ಬಂದ್ : ಅಗತ್ಯ ಔಷಧಿಗೆ ವಿಶೇಷ ಕೌಂಟರ್‌-ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‍ಗಳು ಬಂದ್  ಆಗಲಿವೆ. ಆನ್‍ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‍ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ (ಎಐಓಸಿಡಿ) ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಕರ್ನಾಟಕದಲ್ಲೂ ರಾಜ್ಯ ಔಷಧಿ ಮಾರಾಟ ವ್ಯಾಪಾರಿಗಳ ಸಂಘ ಬಂದ್‍ಗೆ ಬೆಂಬಲ ನೀಡಿದೆ. ರಾಜ್ಯಾದ್ಯಂತ 26 ಸಾವಿರಕ್ಕೂ ಅಧಿಕ ಮೆಡಿಕಲ್‍ಗಳು ಇಂದು ಬಂದ್ ಆಗಲಿವೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯವಾಣಿಜ್ಯಸುದ್ದಿ

ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ : ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!-ಕಹಳೆ ನ್ಯೂಸ್

ಪುತ್ತೂರು: ದಿ ಆರ್ಟ್ ಆಫ್ ಜ್ಯುವೆಲ್ಲರಿ (ಎಒಜೆ) ಮ್ಯಾಗಜೀನ್ 2025-26ರ ಅವಧಿಗೆ ಭಾರತದ ಅತ್ಯುತ್ತಮ 100 ಜ್ಯುವೆಲ್ಲರಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಪುತ್ತೂರು ಸಹಿತ ಹಲವು ಕಡೆ ಶಾಖೆಗಳನ್ನು ಹೊಂದಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸಂಸ್ಥೆ ಕೂಡಾ ಟಾಪ್ ಪಟ್ಟಿಗೆ ಸೇರಿದೆ. ದಿ ಆರ್ಟ್ ಆಫ್ ಜ್ಯುವೆಲ್ಲರಿ ಸಂಚಿಕೆಯಲ್ಲಿ ಭಾರತದಲ್ಲಿ ಚಿನ್ನ ಮತ್ತು ಆಭರಣಗಳ ಉದ್ಯಮದಲ್ಲಿ ಸಾಧಕರನ್ನು ಗುರುತಿಸುತ್ತದೆ. ಈ ಭಾರಿ ಟಾಪ್ 100 ಚಿನ್ನದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆ, ರಾಜ್ಯದಲ್ಲಿ ಉತ್ತಮ ಮಳೆಗಾಗಿ ತಿಮ್ಮಪ್ಪನ ಬಳಿ ಪ್ರಾರ್ಥನೆ: ಡಿಕೆಶಿ -ಕಹಳೆ ನ್ಯೂಸ್

ಬೆಂಗಳೂರು: ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲಬಾರದು. ಎಲ್ಲರಿಗೂ ಶಕ್ತಿ, ಉತ್ತಮ ಆರೋಗ್ಯ ಲಭಿಸಲಿ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಡಿಸಿಎಂ ಡಿಕೆಶಿ ಅವರು ತಿರುಮಲದಲ್ಲಿ  ಮಂಗಳವಾರ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು, ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಇಡೀ ದೇಶ ಶಾಂತಿಯಿಂದ ಕೂಡಿರಲಿ. ಸವಾಲುಗಳನ್ನು ಸಮರ್ಥವಾಗಿ ಎದುರಿಸಲಿ ಎಂದು ಕೋರಿಕೊಂಡಿದ್ದೇನೆ. ಈ ಮಹತ್ವದ ದಿನದಂದು ಇಲ್ಲಿಗೆ ಬಂದಿರುವುದಕ್ಕೆ...
ಮುಂಬೈಶಿಕ್ಷಣಸುದ್ದಿ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ : ಆರ್‌ಸಿಸಿ ಕೋಚಿಂಗ್ ಸೆಂಟರ್ ಮಾಲೀಕ ಅರೆಸ್ಟ್-ಕಹಳೆ ನ್ಯೂಸ್

ಮುಂಬೈ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮಹಾರಾಷ್ಟ್ರದ  ಲಾತೂರ್‌ನಲ್ಲಿ  ರೇಣುಕೈ ರಸಾಯನಶಾಸ್ತ್ರ ತರಗತಿಗಳ ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್‌ನನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ಸಿಬಿಐ ಶೋಧ ನಡೆಸಿದ ಸಮಯದಲ್ಲಿ ಮೋಟೆಂಗಾಂವ್ಕರ್ ಮೊಬೈಲ್‌ನಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಪತ್ತೆಯಾಗಿದೆ. ಬಳಿಕ ಶಿವರಾಜ್‌ನನ್ನು ಬಂಧಿಸಲಾಗಿದೆ. ನೀಟ್ ಯುಜಿ ಪತ್ರಿಕೆ ಸೋರಿಕೆ ಮತ್ತು ಪ್ರಸರಣದಲ್ಲಿ ಭಾಗಿಯಾಗಿರುವ ಸಂಘಟಿತ ಗ್ಯಾಂಗ್‌ನ ಸಕ್ರಿಯ ಸದಸ್ಯ ಮೋಟೆಗಾಂವ್ಕರ್...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದೂ ವರುಣನ ಅಬ್ಬರ! ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಾದ್ಯಂತ ಸೋಮವಾರ ಬಂದ ಜೋರು ಮಳೆಗೆ ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ಅಪಾರ್ಟ್​ಮೆಂಟ್​ಗಳಿಗೆಲ್ಲಾ ನೀರು ನುಗ್ಗಿದ್ದು, ರಸ್ತೆಗಳು ಜಲಾವೃತವಾಗಿವೆ. ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್‌ಗಳಿಗೆ ಭಾರೀ ಡಿಮ್ಯಾಂಡ್‌-ಕಹಳೆ ನ್ಯೂಸ್

ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಪಶ್ಚಿಮ ಏಷ್ಯಾದಲ್ಲಿನ ಸಮರದ ಎಫೆಕ್ಟ್‌ನಿಂದ ಇಂಧನ ಬಿಕ್ಕಟ್ಟು ಶುರುವಾಗಿದೆ. ಇಂಧನ ದರ ಏರಿಕೆಯಿಂದ ಪ್ರಯಾಣ ವೆಚ್ಚ ಹೆಚ್ಚಾಗಿದೆ. ಇದು ವಾಹನ ಸವಾರರ ಆರ್ಥಿಕ ಒತ್ತಡಕ್ಕೆ ಕಾರವಾಗಿದೆ. ಇತ್ತೀಚೆಗೆ ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್‌ಗೆ ಮೂರು ರೂಪಾಯಿ ಏರಿಕೆಯಾಗಿತ್ತು. ಇಂದು 90 ಪೈಸೆ ಏರಿಕೆಯಾಗಿದೆ. ವಾಹನ ಸವಾರರ ಆಕ್ರೋಶ...
1 8 9 10 11 12 345
Page 10 of 345