Tuesday, June 16, 2026

ರಾಷ್ಟ್ರೀಯ

ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯಸುದ್ದಿ

ಮೋದಿಯವರ ವಿರುದ್ಧ ಸಚಿವ ಶಿವರಾಜ್ ತಂಗಡಗಿ ಅವಮಾನಕಾರಿ ಹೇಳಿಕೆ : ಡಾ. ಭರತ್ ಶೆಟ್ಟಿ ತೀವ್ರ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಅವಮಾನಕಾರಿ ಕವನ ವಾಚಿಸಿ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಬಿಜೆಪಿ ಮುಖಂಡ ಡಾ. ಭರತ್ ಶೆಟ್ಟಿ ತೀವ್ರ  ನೀಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಾ. ಭರತ್ ಶೆಟ್ಟಿ, “ಸಚಿವ ಸ್ಥಾನದಲ್ಲಿರುವವರು ಈ ರೀತಿಯ ವೈಯಕ್ತಿಕ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡುವುದು ಅತ್ಯಂತ ದುರದೃಷ್ಟಕರ....
ದೆಹಲಿರಾಜ್ಯಸುದ್ದಿ

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ -ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ ಆರನೇ ಗಂಗಾ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ನರೇಂದ್ರ ಮೋದಿ  ಇಂದು ಉದ್ಘಾಟಿಸಿದರು. ಸುಮಾರು 36,230 ಕೋಟಿ ರೂಪಾಯಿಗಳ ಒಟ್ಟು ವೆಚ್ಚದಲ್ಲಿ ನಿರ್ಮಿಸಲಾದ ಗಂಗಾ ಎಕ್ಸ್‌ಪ್ರೆಸ್‌ವೇ, ಮೀರತ್ ಮತ್ತು ಪ್ರಯಾಗ್‌ರಾಜ್ ನಡುವಿನ ಪ್ರಯಾಣವನ್ನು ಸುಗಮಗೊಳಿಸುತ್ತದೆ. ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ 10-12 ಗಂಟೆಗಳಿಂದ ಸುಮಾರು 6 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಮೀರತ್, ಬುಲಂದ್‌ಶಹರ್, ಹಾಪುರ್, ಅಮ್ರೋಹಾ, ಸಂಭಾಲ್, ಬದೌನ್, ಶಹಜಹಾನ್‌ಪುರ, ಹಾರ್ದೋಯ್, ಉನ್ನಾವ್, ರಾಯ್‌ಬರೇಲಿ, ಪ್ರತಾಪ್‌ಗಢ...
ಜಿಲ್ಲೆದೆಹಲಿಸುದ್ದಿ

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ : ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ -ಕಹಳೆ ನ್ಯೂಸ್

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಎರಡು ದಿನಗಳ ಭೇಟಿ ಕೈಗೊಂಡಿದ್ದು ಇಂದು ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ ಕೈಗೊಂಡು ಬಳಿಕ ತ್ರಿಶೂಲ ಹಿಡಿದು ಡಮರು ನುಡಿಸಿದರು. ಇದಕ್ಕೂ ಮೊದಲು ಅವರು ರೋಡ್‌ಶೋ ನಡೆಸಿದರು. ಲೋಕೋಮೋಟಿವ್ ವರ್ಕ್ಸ್‌ ನಿಂದ ಆರಂಭಗೊಂಡು ರೋಡ್‌ ಶೋ ಲಹರ್ತಾರಾ, ಕಚಹರಿ, ಅಂಬೇಡ್ಕರ್ ಚೌರಾಹಾ, ಚೌಕಾಘಾಟ್, ತೆಲಿಯಾಬಾಗ್, ಲಹುರಾಬೀರ್ ಮತ್ತು ಮೈದಾಗಿನ್ ಮೂಲಕ ಸಾಗುತ್ತಾ ಅಂತಿಮವಾಗಿ ಕಾಶಿ ವಿಶ್ವನಾಥ ದೇಗುಲದಲ್ಲಿ...
ದೆಹಲಿರಾಜ್ಯಸುದ್ದಿ

ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌ -ಕಹಳೆ ನ್ಯೂಸ್

ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  ಜೈಲು ಸೇರಿರುವ ದರ್ಶನ್‌  ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌  ಮೊರೆ ಹೋಗಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್‌ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು ಸೇರಿದ 8 ತಿಂಗಳ ಬಳಿಕ ಈ ಅರ್ಜಿ ಸಲ್ಲಿಸಿದ್ದು, ಮೇ 4 ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಜಾಮೀನು ಅರ್ಜಿಯಲ್ಲಿ ಪ್ರಕರಣದ ಟ್ರಯಲ್ ಪ್ರಾರಂಭವಾಗಿದೆ. 8 ತಿಂಗಳು ಕಳೆದ್ರೂ ಕೂಡ ಸಾಕ್ಷಿಗಳ ವಿಚಾರಣೆ...
ದೆಹಲಿರಾಜ್ಯಸುದ್ದಿ

ದೆಹಲಿಗೆ ಸಚಿವರ ದಂಡು : ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ -ಕಹಳೆ ನ್ಯೂಸ್

ನವದೆಹಲಿ: ಪಂಚರಾಜ್ಯಗಳ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಮುಖ ಸಚಿವರು, ನಾಯಕರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರಿಗೆ ಗೊಂದಲ ಇತ್ಯರ್ಥಪಡಿಸಲು ಒತ್ತಡ ಹೇರುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಸಚಿವರಾದ ಸತೀಶ್ ಜಾರಕಿ‌ಹೊಳಿ, ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಳೆದ ಏಳೆಂಟು ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ವಿಚಾರ...
ಮುಂಬೈರಾಜ್ಯಸುದ್ದಿ

ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ -ಕಹಳೆ ನ್ಯೂಸ್

ಮುಂಬೈ: ಇಲ್ಲಿನ  ಮೀರಾ ರಸ್ತೆಯಲ್ಲಿ ಇಂದು (ಏ.28) ಮುಂಜಾನೆ ಪಹಲ್ಗಾಮ್‌ ಮಾದರಿಯ ದಾಳಿ  ನಡೆದಿದೆ. ಕಟ್ಟಡವೊಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಹಿಂದುಗಳು ಕಲ್ಮಾ ಪಠಿಸದೇ ಇದ್ದಿದ್ದಕ್ಕೆ ದುಷ್ಕರ್ಮಿಯೊಬ್ಬ ಚಾಕು ಇರಿದಿದ್ದಾನೆ. ಚಾಕು ಇರಿಯುವ ಮುನ್ನ ಧರ್ಮ ಕೇಳಿ, ಕಲ್ಮಾ  ಪಠಿಸಲು ಸೂಚಿಸಿದ್ದ ಎಂದು ವರದಿಯಾಗಿದೆ. ಚಾಕು ಇರಿತಕ್ಕೊಳಗಾದವರನ್ನು ರಾಜ್‌ಕುಮಾರ್ ಮಿಶ್ರಾ ಮತ್ತು ಸುಬ್ರೋತೋ ರಮೇಶ್ ಸೇನ್ ಎಂದು ಗುರುತಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿ ಜೈಬ್ ಜುಬೈರ್ ಅನ್ಸಾರಿ (31)...
ಬೆಂಗಳೂರುರಾಜ್ಯಸುದ್ದಿ

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ-ಕಹಳೆ ನ್ಯೂಸ್

ಬೆಂಗಳೂರು: ನಗರದ ಕೋರಮಂಗಲ  ಚೆಕ್‌ಪೋಸ್ಟ್‌ ಬಳಿ ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ ನೀಡುತ್ತಿದ್ದ 6 ವಿದೇಶಿ ಮಹಿಳೆಯರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಸ್ತೆಯಲ್ಲಿ ನಿಂತು ಆರು ಮಹಿಳೆಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. 6 ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ವಿದೇಶಿ ಮಹಿಳೆಯರ ಬಳಿ ಇರುವ ಪಾಸ್‌ಪೋರ್ಟ್, ವೀಸಾ ಪರಿಶೀಲನೆ ನಡೆಸಲಾಗುತ್ತಿದೆ. ಈ ಸಂಬಂಧ ಕೋರಮಂಗಲ ಪೊಲೀಸ್...
ಬೆಂಗಳೂರುರಾಜ್ಯಸುದ್ದಿ

ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ : ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು -ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿಯ ನಂದಿನಿ ಲೇಔಟ್‌ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ  ಅವಘಡದಲ್ಲಿ ಪ್ಲಾಸ್ಟಿಕ್ ಗೋಡೌನ್‌ವೊಂದು ಸಂಪೂರ್ಣ ಭಸ್ಮವಾಗಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಲೇಡಿಸ್ ಪಿಜಿಗೂ ಹಬ್ಬಿದ ಪರಿಣಾಮ ಯುವತಿಯರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ನಂದಿನಿ ಲೇಔಟ್ ವ್ಯಾಪ್ತಿಯ ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮನೆಗಳಿಗೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಮನೆಯ ಮುಂಭಾಗದ ಮರಗಳು ಹಾಗೂ ಕಬ್ಬಿಣದ ಗೇಟ್‌ಗಳು ಕೂಡ...
1 14 15 16 17 18 346
Page 16 of 346