ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ -ಕಹಳೆ ನ್ಯೂಸ್
ಬೆಂಗಳೂರು: ಪ್ರಮಾಣವಚನ ಸ್ವೀಕಾರ ಮಾಡಿ 10 ದಿನ ಕಳೆದರೂ ಸಚಿವ ಕೃಷ್ಣ ಬೈರೇಗೌಡ ಇನ್ನೂ ಬೆಂಗಳೂರು ಅಭಿವೃದ್ಧಿ ಖಾತೆ ಅಧಿಕಾರ ವಹಿಸಿಕೊಂಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು ಎಂದಿದ್ದಾರೆ. ಖಾತೆ ಅಧಿಕಾರ ವಹಿಸಿಕೊಳ್ಳದ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಖಾತೆ ವಿಚಾರಕ್ಕೆ ಕೆಲವು ಸ್ಪಷ್ಟತೆ ಬೇಕಿದೆ. ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು. ಜವಾಬ್ದಾರಿಗೆ ಸರಿಯಾಗಿ ನಿರ್ವಹಣೆ...






