ಸನಾತನ ಧರ್ಮ ವಿವಾದ ; ವಿಶ್ವ ಹಿಂದೂ ಪರಿಷತ್ ದೂರಿನಡಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್ಐಆರ್ ದಾಖಲು! – ಕಹಳೆ ನ್ಯೂಸ್
ಮುಂಬೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್, ಕಳೆದ ಕೆಲವು ದಿನಗಳ ಹಿಂದೆ ಸನಾತನ ಧರ್ಮದ ವಿರುದ್ಧ ನೀಡಿದ್ದ ಹೇಳಿಕೆಗೆ ಇದೀಗ ಮುಂಬೈ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆಗೆ ದೇಶವ್ಯಾಪಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವ್ಯಾಪಕ ಟೀಕೆಗೆ ಗುರಿಯಾಗಿದ್ದ ಡಿಎಂಕೆ ನಾಯಕನ ವಿರುದ್ಧ ಮುಂಬೈನ ರಾಜಧಾನಿ ಮಹಾರಾಷ್ಟ್ರದಲ್ಲಿ ಎಫ್ಐಆರ್ ದಾಖಲಾಗಿದೆ. ಮುಂಬೈನ...






