ಬಜರಂಗದಳ ನಿಷೇಧ – ಕಾಂಗ್ರೆಸ್ಗೆ ಠಕ್ಕರ್ ; ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ – ಕಹಳೆ ನ್ಯೂಸ್
ಬೆಂಗಳೂರು: ಚುನಾವಣೆಗೆ ಬೆರಳೆಣಿಕೆಯಷ್ಟು ದಿನಗಳು ಉಳಿದುಕೊಂಡಿರುವ ಸಮಯದಲ್ಲಿ ಕಾಂಗ್ರೆಸ್ (Congress) ಬಜರಂಗದಳವನ್ನು (Bajrang Dal) ನಿಷೇಧಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಹಾಕಿ ವಿವಾದವನ್ನು ಎಳೆದುಕೊಂಡಿದೆ. ಇದೀಗ ಬಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಕಾಂಗ್ರೆಸ್ಗೆ ಠಕ್ಕರ್ ಕೊಡಲು ಮುಂದಾಗಿದೆ. ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ (Temple) ಹನುಮಾನ್ ಚಾಲೀಸಾ (Hanuman Chalisa) ಪಠಿಸಲು ಬಜರಂಗದಳ ನಿರ್ಧರಿಸಿದೆ. ಸಂಜೆ 7 ಗಂಟೆಗೆ ಹನುಮಾನ್ ಚಾಲೀಸಾ ಪಠಣ ಆಯೋಜನೆಗೆ ಸಿದ್ಧತೆ ನಡೆಸುತ್ತಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್...







