Saturday, March 14, 2026

ರಾಷ್ಟ್ರೀಯ

ರಾಜಕೀಯರಾಷ್ಟ್ರೀಯಸುದ್ದಿ

ಗಣರಾಜ್ಯೋತ್ಸವ ಸಂಭ್ರಮ: ಮೋದಿ ಟೋಪಿ, ಶಾಲು ವಿಶೇಷತೆ ಏನು? – ಕಹಳೆ ನ್ಯೂಸ್

ನವದೆಹಲಿ: 73ನೇ ಗಣರಾಜ್ಯೋತ್ಸವದ ನಿಮಿತ್ತ ನವದೆಹಲಿಯ ರಾಜ್‍ಪಥ್‍ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಉಡುಗೆಯ ಶೈಲಿ ಎಲ್ಲರನ್ನು ಆಕರ್ಷಿಸಿತು. ಅವರು ಉತ್ತರಾಖಂಡದ ಸಾಂಪ್ರದಾಯಿಕ ಟೋಪಿ ಧರಿಸಿ ಆಗಮಿಸಿದ್ದು, ವಿಶೇಷವಾಗಿತ್ತು. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ಬುಧವಾರದಂದು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸಿದ ಮೋದಿ ಅವರು ಉತ್ತರ ಖಂಡದ ರಾಷ್ಟ್ರೀಯ ಹೂವು ಬ್ರಹ್ಮಕಮಲದೊಂದಿಗೆ ಉತ್ತರಾಖಂಡದ ಟೋಪಿಯನ್ನು ಧರಿಸಿದ್ದಾರೆ. ಜೊತೆಗೆ ಮಣಿಪುರದ ಶಾಲು ಧರಿಸಿರುವುದು ವಿಶೇಷವಾಗಿದೆ. ಮೋದಿ ಅವರ ಉಡುಗೆಯು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರುರಾಜ್ಯಸುದ್ದಿ

2-3 ವಾರಗಳಲ್ಲಿ ಕೊರೊನಾ ಸೋಂಕು ಇಳಿಕೆ : ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ಕೊಟ್ಟ ಆರೋಗ್ಯ ಸಚಿವ ಡಾ.ಕೆ. ಸುಧಾಕರ್- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇನ್ನೂ 2-3 ವಾರಗಳಲ್ಲಿ ಕೊರೊನಾ ಸೋಂಕು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸದ್ಯ ಜಿಲ್ಲೆಗಳಲ್ಲಿ ಕೊರೊನಾ ಹೊಸ ಪ್ರಕರಣಗಳು ಏರಿಕೆಯಾಗುತ್ತಿವೆ. 2-3 ವಾರಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಲಿದೆ. ಸದ್ಯ ಸೋಂಕು ಪ್ರಕರಣಗಳಿಂದ ಆಸ್ಪತ್ರೆ ದಾಖಲಾತಿಗೆ ಹೆಚ್ಚು ಗಮನ ನೀಡಲಾಗಿದ್ದು, ಸದ್ಯ ಆಸ್ಪತ್ರೆ ದಾಖಲಾತಿ ಕಡಿಮೆ ಇದೆ. ಒಂದು ವೇಳೆ ಹೆಚ್ಚಾದ್ರೆ ನಿಬರ್ಂಧ ಹೆಚ್ಚಿಸಲು ಕ್ರಮ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಾದ್ಯಂತ ವೀಕೆಂಡ್ ಕಫ್ರ್ಯೂ ರದ್ದು: ಮಹತ್ವದ ನಿರ್ಧಾರ ಕೈಗೊಂಡ ಸಿಎಂ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕಪ್ರ್ಯೂ ಹಾಗೂ ನೈಟ್ ಕಪ್ರ್ಯೂಗೆ ಬಗ್ಗೆ ಅನೇಕರು ಆಕ್ಷೇಪ ವ್ಯಕ್ತ ಪಡಿಸಿದ್ದು, ಇದೀಗ ಸರ್ಕಾರ 2 ವಾರಗಳಿಗೆ ವೀಕೆಂಡ್ ಕಪ್ರ್ಯೂವನ್ನು ರದ್ದುಗೊಳಿಸಿದೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ಕುರಿತ ತಜ್ಞರು, ಸಚಿವರ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯಾದ್ಯಂತ ವೀಕೆಂಡ್ ಕಫ್ರ್ಯೂ ತೆರವುಗೊಳಿಸುವಂತೆ ಸರ್ಕಾರಕ್ಕೆ ತಜ್ಞರು ಶಿಫಾರಸು ಮಾಡಿದ್ದಾರೆ ಎನ್ನಲಾಗಿದ್ದು, ನೈಟ್ ಕಪ್ರ್ಯೂ ಮುಂದುವರಿಯಲಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

S.T. ಸೋಮಶೇಖರ್ ಪುತ್ರನಿಗೆ ಮಹಿಳೆಯ ಜೊತೆಯಲ್ಲಿರುವ ನಕಲಿ ಅಶ್ಲೀಲ ವೀಡಿಯೋ ಬ್ಲ್ಯಾಕ್‍ಮೇಲ್…!? – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಸಚಿವ ಎಸ್.ಟಿ.ಸೋಮಶೇಖರ್ ಪುತ್ರನಿಗೆ ನಕಲಿ ಅಶ್ಲೀಲ ವೀಡಿಯೋ ಕಳುಹಿಸಿ ಅಪರಿಚಿತರು ಬ್ಲಾಕ್ ಮೇಲ್ ಮಾಡಿದ್ದಾರೆ. ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್‍ಗೆ ನಕಲಿ ವೀಡಿಯೋ ಸೃಷ್ಟಿಸಿ ಹಣಕ್ಕೆ ಅಪರಿಚಿತರು ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಹಿನ್ನೆಲೆ ಆಡುಗೋಡಿಯಲ್ಲಿರುವ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿಶಾಂತ್ ದೂರು ದಾಖಲಿಸಿದ್ದಾರೆ. ನಾನು ರಾಜಕೀಯವಾಗಿ ಬಿಜೆಪಿ ಪಕ್ಷದಿಂದ ಗುರುತಿಸಿಕೊಂಡಿದ್ದೇನೆ. ನನ್ನ ಮತ್ತು ನನ್ನ ತಂದೆ ರಾಜಕೀಯ ಬೆಳವಣಿಗೆ ಸಹಿಸದ ಕೆಲವು ದುಷ್ಕರ್ಮಿಗಳು ರಾಜಕೀಯವಾಗಿ ನಮ್ಮನ್ನು ಮುಗಿಸಬೇಕೆಂಬ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಯಕತ್ವಕ್ಕಾಗಿ ಡಿಕೆಶಿಯಿಂದ ಪಾದಯಾತ್ರೆ ಡ್ರಾಮಾ ; ‘ತಮಿಳುನಾಡಲ್ಲಿ ಮಗುವನ್ನು ಚಿವುಟಿ ಕರ್ನಾಟದಲ್ಲಿ ತೊಟ್ಟಿಲು ತೂಗುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ’ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು: ಸರ್ಕಾರ ಜಾರಿಗೆ ತಂದಿರುವ ಕಾನೂನುಗಳಿಗೆ ಕಾಂಗ್ರೆಸ್ ಗೌರವ ನೀಡದೆ, ಕೇವಲ ನಾಯಕತ್ವಕ್ಕಾಗಿ ಡಿ.ಕೆ. ಶಿವಕುಮಾರ್ ಮೇಕೆದಾಟು ಪಾದಯಾತ್ರೆ ಎಂಬ ಡ್ರಾಮಾ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮೇಕೆದಾಟು ಯೋಜನೆಗೆ ಕರ್ನಾಟಕದ ಭಾಜಪಾ ಸರಕಾರ ಬದ್ಧವಾಗಿದೆ ಎಂದು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮೈ ಕೈ ನೋವು, ಸುಸ್ತಿನಿಂದ ಬಳಲುತ್ತಿರುವ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್‌ – ಕಹಳೆ ನ್ಯೂಸ್

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುಮಾರು ನಾಲ್ಕು ಕಿ.ಮೀ. ನಡೆದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮೈ ಕೈ ನೋವು, ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿಗಾಗಿ ಅವರು ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ. ಮೇಕೆದಾಟು ಯೋಜನೆ ಕುರಿತಂತೆ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಸಿದ್ದರಾಮಯ್ಯ ಅವರು ಹೆಗ್ಗನೂರು ತಲುಪಿದ ಬಳಿಕ ಭೋಜನ ವಿರಾಮ ಪಡೆದುಕೊಂಡಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಬೂಸ್ಟರ್ ಡೋಸ್ ಸ್ವೀಕರಿಸಿದ್ದ ಸಿದ್ದರಾಮಯ್ಯ ಅವರಿಗೆ ಈ ವೇಳೆ ಸುಸ್ತು ಹಾಗೂ ಮೈ...
ಬೆಂಗಳೂರುಸಿನಿಮಾಸುದ್ದಿ

ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇ ಗಿಫ್ಟ್ ಕೊಟ್ಟ ಚಿತ್ರತಂಡ : ಕೆಜಿಎಫ್-2ನ ಹೊಸ ಪೋಸ್ಟರ್ ರಿಲೀಸ್- ಕಹಳೆ ನ್ಯೂಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇಗೆ ಕೆಜಿಎಫ್-2 ಸಿನಿಮಾ ಟೀಸರ್ ಹೊರಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಈಗ ಅದು ಸುಳ್ಳಾಗಿದ್ದು, ಇದರ ಬದಲು ಫ್ಯಾನ್ಸ್ ಖುಷಿಯಾಗಲೆಂದು ಕೆಜಿಎಫ್ 2 ಚಿತ್ರ ತಂಡವು ಯಶ್ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಎಚ್ಚರಿಕೆ ಫಲಕದ ಹಿಂದೆ ರಾಕಿ ಭಾಯಿ ನಿಂತಿರುವ ಪೋಸ್ಟರ್ ಹೊರಬಿಟ್ಟಿರುವ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಹೊಂಬಾಳೆ ಫಿಲಂಸ್ ಯಶ್ ಬರ್ತ್ ಡೇಗೆ ಶುಭ ಕೋರಿದ್ದಾರೆ....
ಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಜ. 10 ರಿಂದ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ `ಬೂಸ್ಟರ್ ಡೋಸ್’ ನೀಡಿಕೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಜ.10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರು, ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಎಲ್ಲ ಮುಂಚೂಣಿ ವಾರಿಯರ್ ಗಳಿಗೆ ಮೂರನೇ ಅಥವಾ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ....
1 264 265 266 267 268 319
Page 266 of 319