ದೀಪಾವಳಿ ಹಬ್ಬಕ್ಕೆ ದೇಶದ ಜನತೆಗೆ ಭರ್ಜರಿ ಗಿಫ್ಟ್ ನೀಡಿದ ಮೋದಿ ಸರಕಾರ ; ಡೀಸೆಲ್ – ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಭಾರೀ ಕಡಿತ – ಕಹಳೆ ನ್ಯೂಸ್
ನವದೆಹಲಿ, ನ. 03 : ವಾಹನ ಸವಾರರಿಗೆ ಮೋದಿ ನೇತೃತ್ವದ ಕೇಂದ್ರ ಸರಕಾರ ಶುಭ ಸುದ್ದಿ ನೀಡಿದೆ. ಸತತ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಸವಾರರು ಅಲ್ಪ ನಿಟ್ಟುಸಿರು ಬಿಡುವಂತಾಗಿದ್ದು, ದೀಪಾವಳಿ ವೇಳೆಗೆ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಅಲ್ಪ ಕಡಿಮೆ ಮಾಡಿ ಉಡುಗೊರೆ ನೀಡಿದೆ. ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಪ್ರತಿ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಮೇಲಿನ ಅಬಕಾರಿ...






