ಲಯನ್ಸ್ ಕ್ಲಬ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕು; ಡಾ ಪೂರ್ವಿ ಜಯರಾಜ್-ಕಹಳೆ ನ್ಯೂಸ್
ಬೆಂಗಳೂರು : ಖ್ಯಾತ ವೈದ್ಯೆ ಡಾ ಪೂರ್ವಿ ಜಯರಾಜ್ ಅವರು, ಕೋವಿಡ್ ಸಂಕಷ್ಟ ಕಾಲದಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದ್ದಾರೆ. ನಗರದ ಖಾಸಗಿ ಹೋಟೇಲ್ ನಲ್ಲಿ ಲಯನ್ಸ್ ಕ್ಲಬ್ಸ್ ಇಂಟರ್‍ನ್ಯಾಷನಲ್ ಡಿಸ್ಟ್ರಿಕ್ಟ್ 317ಎ ವತಿಯಿಂದ ಆಯೋಜಿಸಲಾಗಿದ್ದ ಪ್ರಾಂತೀಯ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೋವಿಡ್ ಸಾಂಕ್ರಾಮಿಕ ರೋಗದ ಕಾರಣವಾಗಿ ಹಲವಾರು ಜನರು ಡಿಪ್ರೆಷನ್ ಹಾಗೂ ಒತ್ತಡಕ್ಕೆ ಒಳಗಾಗುತ್ತಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ...







