ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹಿಂದಿನ ಸಂಪ್ರದಾಯದಂತೆಯೇ ಮಹಾಶಿವರಾತ್ರಿ ಹಬ್ಬ ಆಚರಣೆಯಾಗಲಿ ; ಹೈಕೋರ್ಟ್-ಕಹಳೆ ನ್ಯೂಸ್
ಬೆಂಗಳೂರು : ಹೈಕೋರ್ಟ್ ದೇವಾಲಯದ ಆಡಳಿತ ಮಂಡಳಿಗೆ , ದ.ಕ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹಿಂದಿನ ಸಂಪ್ರದಾಯದಂತೆಯೇ ಮಹಾಶಿವರಾತ್ರಿ ಹಬ್ಬ ಆಚರಣೆ ಮಾಡಿ ಎಂದು ನಿರ್ದೇಶನ ನೀಡಿದೆ. ಆದರೆ ಮಹಾಶಿವರಾತ್ರಿ ಹಬ್ಬವನ್ನು ಶೈವ ಪದ್ದತಿಯ ಅನುಸಾರ ಆಚರಿಸಲು ಅವಕಾಶ ನೀಡುವಂತೆ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ ದೇವಸ್ಥಾನದ ಭಕ್ತರಾದ ಬಿ.ಆರ್.ಮುರಳೀಧರನ್, ವಿಜಯಸಿಂಹ ಮತ್ತು ಇತರರು ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು....







