Recent Posts

Saturday, September 12, 2026

ರಾಷ್ಟ್ರೀಯ

ಜಿಲ್ಲೆಮುಂಬೈಸುದ್ದಿ

200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗು ಜನನ : ರಥದಲ್ಲಿ ಕೂರಿಸಿ ಅದ್ದೂರಿ ಸ್ವಾಗತ – ಕಹಳೆ ನ್ಯೂಸ್

ಮುಂಬೈ: ಹೆಣ್ಣು ಮಗು ಬೇಡ ಎಂದು ಭ್ರೂಣ ಹತ್ಯೆ ಮಾಡಿಸುವ ಈ ಕಾಲದಲ್ಲಿ ಹೆಣ್ಣು ಮಗು ಜನಿಸಿದೆ ಎಂದು ಕುಟುಂಬವೊಂದು ರಥದಲ್ಲಿ ಕೂರಿಸಿ ಅದ್ದೂರಿಯಾಗಿ ಸ್ವಾಗತಿಸಿರುವ ಘಟನೆ ಮಹಾರಾಷ್ಟ್ರದ ಬೀಡ್‌ನಲ್ಲಿ (Beed) ನಡೆದಿದೆ. ಹೌದು, ಈ ಕುಟುಂಬದಲ್ಲಿ ಸುಮಾರು 200 ವರ್ಷಗಳ ಅಂದರೆ ನಾಲ್ಕು ತಲೆಮಾರುಗಳ ಬಳಿಕ ಹೆಣ್ಣು ಮಗು ಜನಿಸಿದೆ. ಹೆರಿಗೆಯಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕುಟುಂಬಸ್ಥರು ಮಗು ಹಾಗೂ ತಾಯಿಯನ್ನು ರಥದಲ್ಲಿ ಕೂರಿಸಿ, ತಾಳ-ವಾದ್ಯಗಳು ಹಾಗೂ ನೃತ್ಯದೊಂದಿಗೆ...
ದೆಹಲಿರಾಜ್ಯಸುದ್ದಿ

ಗ್ಯಾಂಗ್‌ರೇಪ್ ಬೆನ್ನಲ್ಲೇ ದೆಹಲಿಯಲ್ಲಿ ಬಸ್‌ಗಳಿಗೆ ಹೊಸ ರೂಲ್ಸ್ – ಪ್ಯಾನಿಕ್ ಬಟನ್ ಕಡ್ಡಾಯ, ಕಿಟಕಿಗಳಿಗೆ ಪರದೆ ಹಾಕಂಗಿಲ್ಲ – ಕಹಳೆ ನ್ಯೂಸ್

ನವದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ದೆಹಲಿ ಸರ್ಕಾರ ಬಸ್‌ಗಳ ಸುರಕ್ಷತಾ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ದೆಹಲಿಯಲ್ಲಿ ಸಂಚರಿಸುವ ಎಲ್ಲಾ ಬಸ್‌ಗಳಲ್ಲಿ ಪ್ಯಾನಿಕ್ ಬಟನ್  ಮತ್ತು ವಾಹನ ಟ್ರ‍್ಯಾಕಿಂಗ್ ಸಾಧನಗಳು ಸದಾ ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿರಬೇಕು ಎಂದು ಸಾರಿಗೆ ಇಲಾಖೆ ಹೊಸ ನಿರ್ದೇಶನ ಹೊರಡಿಸಿದೆ. ಬಸ್‌ಗಳ ಕಿಟಕಿಗಳಿಗೆ ಪರದೆ (ಹಾಕುವುದನ್ನು ನಿಷೇಧಿಸಲಾಗಿದೆ. ಬಸ್‌ಗಳ ಒಳಗೆ ಹಾಗೂ ಹೊರಗಿನ ದೃಶ್ಯ ಸ್ಪಷ್ಟವಾಗಿ ಕಾಣುವಂತೆ ನಿಯಮಾನುಸಾರ...
ಬೆಂಗಳೂರುರಾಜ್ಯಸುದ್ದಿ

ಓವರ್‌ಟೇಕ್‌ ಮಾಡಿದ್ದಕ್ಕೆ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ್ರು; ದುನಿಯಾ ವಿಜಯ್ ಪುತ್ರನ ವಿರುದ್ಧ ಗಾಯಾಳು ಮನೀಷ್ ಆರೋಪ – ಕಹಳೆ ನ್ಯೂಸ್

ಬೆಂಗಳೂರು: ನಟ ದುನಿಯಾ ವಿಜಯ್(Dunia Vijay) ಅವರ ಪುತ್ರ ಸಾಮ್ರಾಟ್ ವಿಜಯ್ (Case on Samrat Vijay) ವಿರುದ್ಧ ಕಾಲೇಜು ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಘಟನೆ ಕುರಿತು ಗಾಯಾಳು ಮನೀಷ್‌ ಮಾತನಾಡಿದ್ದಾರೆ. ಆರ್.ಆರ್. ನಗರದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಸಾಮ್ರಾಟ್ ವಿಜಯ್ ಅವರ ಕಾರನ್ನು ಓವರ್‌ಟೇಕ್ ಮಾಡಿದ್ದೇ ಜಗಳಕ್ಕೆ ಕಾರಣ ಎನ್ನಲಾಗಿದೆ. ಬಳಿಕ ಸಾಮ್ರಾಟ್ ಹಾಗೂ ಕೆಲವರು ಸಫಾರಿ ಕಾರಿನಲ್ಲಿ ಬಂದು ಮನೀಷ್‌ನನ್ನು ಕರೆದೊಯ್ದು ಹಲ್ಲೆ...
ಬೆಂಗಳೂರುರಾಜ್ಯಸುದ್ದಿ

ಬೆಂಗ್ಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಸರಣಿ ಅಪಘಾತ : ತಪ್ಪಿದ ಭಾರೀ ಅನಾಹುತ – ಕಹಳೆ ನ್ಯೂಸ್

ಬೆಂಗಳೂರು: ನಗರದ ಏರ್‌ಪೋರ್ಟ್‌ ರಸ್ತೆಯಲ್ಲಿ  ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಭಾರೀ ಅನಾಹುತವೊಂದು ತಪ್ಪಿದೆ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಏರ್ಪೋರ್ಟ್ ರಸ್ತೆಯ ಫ್ಲೈ ಓವರ್ ಮೇಲೆ ಅಪಘಾತ (Accident) ಸಂಭವಿಸಿದ್ದು, 5 ವಾಹನಗಳು ಜಖಂಗೊಂಡಿವೆ. ಚಲಿಸುತ್ತಿದ್ದ ವೇಳೆ ಮುಂದಿನ ವಾಹನ ಇದ್ದಕ್ಕಿದ್ದಂತೆ ಬ್ರೇಕ್‌ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ವಾಹನಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ. ಪರಿಣಾಮ 1 ಟಿಪ್ಪರ್‌, 4 ಕಾರು ಹಾಗೂ 1 ಟಿಟಿ...
ದೆಹಲಿರಾಜ್ಯಸುದ್ದಿ

ಕೌಶಂಬಿಯ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 11 ಕಾರ್ಮಿಕರು ಸಾವು, ಹಲವರು ಗಂಭೀರ – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ  ಕೌಶಂಬಿ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ 11 ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಕೌಶಂಬಿ ಜಿಲ್ಲಾಧಾಕಾರಿ ಅಮಿತ್ ಕುಮಾರ್ ಪಾಲ್ ಅವರು ಮಾಹಿತಿ ನೀಡಿದ್ದಾರೆ. ಸ್ಫೋಟದ (Blast) ತೀವ್ರತೆಗೆ ಇಡೀ ಕಾರ್ಖಾನೆ ಸಂಪೂರ್ಣವಾಗಿ ನೆಲಸಮವಾಗಿದೆ. ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. ಸದ್ಯ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು, ಅವಶೇಷಗಳಡಿಯಿಂದ...
ದೆಹಲಿರಾಜ್ಯಸುದ್ದಿ

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆರೋಪ – ಡ್ರೈವರ್, ಕಂಡಕ್ಟರ್ ಬಂಧನ – ಕಹಳೆ ನ್ಯೂಸ್

ನವದೆಹಲಿ: ಉತ್ತರ ಪ್ರದೇಶದ  16 ವರ್ಷದ ಬಾಲಕಿಯ ಮೇಲೆ ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ  ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಸ್ ಚಾಲಕ ಹಾಗೂ ಕಂಡಕ್ಟರ್‌ರನ್ನು  ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಾಲಕಿಯನ್ನು ಸುಮಾರು 47 ಕಿಲೋಮೀಟರ್ ದೂರ ಕರೆದೊಯ್ದು ಬಳಿಕ ಕಾಶ್ಮೀರಿ ಗೇಟ್ ಬಸ್ ಟರ್ಮಿನಲ್ ಸಮೀಪದ ರಿಂಗ್ ರೋಡ್ ಬಳಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಆಗಸ್ಟ್ 4ರ ರಾತ್ರಿ ಕಾಶ್ಮೀರಿ ಗೇಟ್...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಬಂಧಿತರಾಗಿದ್ದ 31 ಬಾಂಗ್ಲಾ ಪ್ರಜೆಗಳ ಗಡಿಪಾರು – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಗಡಿಪಾರು ಮಾಡುತ್ತಿದ್ದಾರೆ. ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ ಇವರನ್ನು ಬಿಗಿ ಭದ್ರತೆಯೊಂದಿಗೆ ಪಶ್ಚಿಮ ಬಂಗಾಳದ ಗಡಿ ಭಾಗಕ್ಕೆ ಕರೆದೊಯ್ಯಲಾಗುತ್ತಿದೆ. ಬೆಳ್ಳಂಬೆಳಗ್ಗೆಯೇ 31 ಮಂದಿಯನ್ನು ಪೊಲೀಸರು ಬೆಂಗಳೂರಿನ ಎಸ್‌ಎಂವಿಟಿ ರೈಲ್ವೆ ಟರ್ಮಿನಲ್ ಮೂಲಕ ರೈಲಿನಲ್ಲಿ ಕರೆದೊಯ್ದಿದ್ದಾರೆ. ಸುಮಾರು 20 ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಈ ಗಡಿಪಾರು ಪ್ರಕ್ರಿಯೆ ನಡೆಯುತ್ತಿದೆ. ಪೊಲೀಸ್ ಸಿಬ್ಬಂದಿ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದು ಯುವತಿ ಸಾವು, ಯುವಕನ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಬೆಂಗಳೂರು: 7ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿ, ಯುವಕ ಗಂಭಿರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ (Bengaluru) ವೈಟ್‌ಫೀಲ್ಡ್‌ನಲ್ಲಿ (Whitefield) ನಡೆದಿದೆ. ಜನನಿ ಮೃತ ಯುವತಿ, ಈಕೆ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಳು ಎಂದು ತಿಳಿದುಬಂದಿದೆ. ಮಾಣಿಕ್ಯ ವೇಲು ಗಂಭೀರವಾಗಿ ಗಾಯಗೊಂಡ ಯುವಕ. ಆತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ....
1 2 3 4 5 364
Page 3 of 364