ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ ; ಆದರೆ, ಹಿಂದೂವಾಗಿ ಮಸೀದಿ ಉದ್ಘಾಟನೆಗೆ ಹೋಗಲ್ಲ ಎಂದ ಸಿಎಂ ಯೋಗಿ ಆದಿತ್ಯನಾಥ್ – ಕಹಳೆ ನ್ಯೂಸ್
ಲಖ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ. ಆದರೆ, ಹಿಂದೂವಾಗಿ ಮಸೀದಿ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಮಸೀದಿಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲು ನನಗೆ ಆಹ್ವಾನ ನೀಡುತ್ತಾರೆ ಎಂದು ಅನಿಸುವುದಿಲ್ಲ. ಈ ವಿಚಾರದಲ್ಲಿ ನನಗೆ ಯಾವುದೇ ಗೊಂದಲವಿಲ್ಲ. ನಾನು ಮುಖ್ಯಮಂತ್ರಿಯಾಗಿ ತಾರತಮ್ಯ ಮಾಡಲಾರೆ. ಆದರೆ ಹಿಂದೂವಾಗಿ ಮಸೀದಿ...







