ರಾಮ ಮಂದಿರ ಭೂಮಿ ಪೂಜೆಗೂ ಮುನ್ನ ಅಡ್ವಾಣಿ ವಿರುದ್ಧದ ಬಾಬ್ರಿ ಮಸೀದಿ ಪ್ರಕರಣ ಇತ್ಯರ್ಥಗೊಳಿಸಿ : ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹ – ಕಹಳೆ ನ್ಯೂಸ್
ನವದೆಹಲಿ: ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೂ ಮುನ್ನ ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ಅವರ ವಿರುದ್ಧ ಇರುವ ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಕೈಬಿಡಬೇಕು ಎಂದು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿರುವ ಸುಬ್ರಹ್ಮಣಿಯನ್ ಸ್ವಾಮಿ, ಒಂದು ವೇಳೆ ಅಡ್ವಾಣಿ, ಜೋಷಿ ಅವರು ಅಯೋಧ್ಯೆಯಲ್ಲಿನ ಕಟ್ಟಡವನ್ನು ಧ್ವಂಸಗೊಳಿಸಿದ್ದರೂ ಅವರು ಮಸೀದಿಯನ್ನು ಧ್ವಂಸಗೊಳಿಸಿಲ್ಲ, ಬದಲಾಗಿ ದೇವಾಲಯವನ್ನು ಪುನರ್...





