ಬೆಂಗಳೂರಲ್ಲಿ ‘ವಂದೇ ಭಾರತ್’ ರೈಲು ಡಿಕ್ಕಿ : ಸ್ಥಳದಲ್ಲೇ ನರ್ಸಿಂಗ್ ವಿದ್ಯಾರ್ಥಿಗಳ ಸಾವು – ಕಹಳೆ ನ್ಯೂಸ್
ಬೆಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಸಂಭವಿಸಿದೆ. ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ ಸ್ಟೆರಿನ್ ಎಲ್ಜಾ ಸಜಿ (19) ಎಂಬವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಬಾಣಾವರ ಠಾಣೆ ಪೊಲೀಸರು ಮೃತರ ಪೋಷಕರಿಗೆ ಮಾಹಿತಿ ರವಾನಿಸಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು...







