`ಮದೀನಾ’ ಬಳಿ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್ : 42 ಭಾರತೀಯ `ಉಮ್ರಾ ಯಾತ್ರಿಕರು’ ಸಜೀವ ದಹನ.!- ಕಹಳೆ ನ್ಯೂಸ್
ಹೈದರಾಬಾದ್: ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯುತ್ತಿದ್ದ ಪ್ರಯಾಣಿಕ ಬಸ್ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮುಫರಹತ್ ಎಂದು ಗುರುತಿಸಲಾದ ಸ್ಥಳದಲ್ಲಿ ಭಾರತೀಯ ಕಾಲಮಾನ ಬೆಳಗಿನ ಜಾವ 1:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬಲಿಯಾದವರಲ್ಲಿ ಮಹಿಳೆಯರು, ಮಕ್ಕಳು ಮತ್ತು ಹೈದರಾಬಾದ್ ನ ಹಲವಾರು ಯಾತ್ರಿಕರು ಸೇರಿದ್ದಾರೆ ಎಂದು...






