ಡಿಕೆಶಿ ನಿವಾಸಕ್ಕೆ ಗೌತಮ್ ಅದಾನಿ ಭೇಟಿ : ಸುರಂಗ ರಸ್ತೆ ಯೋಜನೆ ಕುರಿತು ಮಹತ್ವದ ಚರ್ಚೆ- ಕಹಳೆ ನ್ಯೂಸ್
ಬೆಂಗಳೂರು: ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಭೇಟಿ ನೀಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಉದ್ದಿಮೆ ಅವಕಾಶಗಳ ಜತೆಗೆ, ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆ ಗುತ್ತಿಗೆ ಹಂಚಿಕೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ಸಂಚಾರ(Bengaluru Traffic) ದಟ್ಟಣೆ ನಿಯಂತ್ರಣಕ್ಕಾಗಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ನಡುವೆ ಸುಮಾರು 17 ಕಿ.ಮೀ....







