ಬೆಂಗಳೂರಲ್ಲಿ ಜಡಿಮಳೆ ; ರಸ್ತೆಗಳು ಜಲಾವೃತ, ವಾಹನ ಸವಾರರು ಪರದಾಟ-ಕಹಳೆ ನ್ಯೂಸ್
ನಿನ್ನೆ ಸಂಜೆಯಿಂದ ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆ ಬೆಂಗಳೂರು: ಸಿಲಿಕಾನ್ ಸಿಟಿ ಮಳೆಯಿಂದ ತೊಯ್ತು ತೊಪ್ಪೆಯಾಗಿದೆ. ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ. ಗುರುವಾರ ಸಂಜೆಯಿಂದ ಶುರುವಾದ ಮಳೆ ಜಿಟಿಜಿಟಿ ಸುರಿಯುತ್ತಿದೆ. ಎಲೆಕ್ಟ್ರಾನಿಕ್ ಸಿಟಿ, ಕೆ.ಆರ್ ಮಾರ್ಕೆಟ್, ಯಲಹಂಕ, ಓಕಳಿಪುರ, ಸರ್ಜಾಪುರ, ಹೆಬ್ಬಾಳ ಸೇರಿದಂತೆ ಹಲವು ಕಡೆ ಮಳೆಯಿಂದ ತೊಂದರೆಯಾಗಿದೆ. ಹಲವು ಕಡೆ ಮರಗಳು ಧರೆಗುರುಳಿವೆ. ಚಾಮರಾಜಪೇಟೆಯ ಸಂಗಮ ಸರ್ಕಲ್ ಬಳಿ ಮರ ಧರೆಗುರುಳಿದೆ. ಹೊಸೂರು ರಸ್ತೆ, ಮೈಸೂರು ರಸ್ತೆ,...







