Monday, September 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಪತ್ನಿಯನ್ನು ಕೊಂದು ಮೋರಿಗೆಸೆದಿದ್ದ ಪತಿ ಅರೆಸ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಶವವನ್ನು ಮೋರಿಗೆ ಎಸೆದಿದ್ದ ಪಾಪಿ ಪತಿಯನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ಗೀತಾ (48) ಹತ್ಯೆಯಾದ ಮಹಿಳೆ. ಈಕೆಯ ಪತಿ ಆಂಟೋನಿ (63) ಕೊಲೆಗೈದ ಆರೋಪಿಯಾಗಿದ್ದಾನೆ. ಈತ ಕುಡಿದು ಬಂದು ಪತ್ನಿ ಜೊತೆಗೆ ಗಲಾಟೆ ಮಾಡಿ ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಶವವನ್ನು ಮೋರಿಗೆ ಎಸೆದಿದ್ದ. ಮಹಿಳೆಯ ಶವದ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ. ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆಗೆ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ನಿಖಿಲ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಉದ್ದೇಶಿತ ರೈತ ವಿರೋಧಿ ಬಿಡದಿ ಟೌನ್‌ಶಿಪ್   ಯೋಜನೆಯನ್ನು ವಿರೋಧಿಸಿ ನಾಳೆ ಆರಂಭವಾಗಲಿರುವ ಬೃಹತ್ ಪಾದಯಾತ್ರೆಗೆ ಮುನ್ನ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಇಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ.ದೇವೇಗೌಡರ ಆಶೀರ್ವಾದ ಪಡೆದರು. ನಿಖಿಲ್ ಕುಮಾರಸ್ವಾಮಿ ಅವರು ದೇವೇಗೌಡರ (H.D.Deve Gowda) ಭೇಟಿ ಮಾಡಿ ಪಾದಯಾತ್ರೆಯ ವಿವರಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನಿಖಿಲ್...
ದೆಹಲಿರಾಜ್ಯಸುದ್ದಿ

ಉದ್ಯೋಗದ ಆಸೆ ತೋರಿಸಿ ಭಾರತೀಯ ಮಹಿಳೆ ಕಿಡ್ನ್ಯಾಪ್; 11 ಲಕ್ಷ ಹಣಕ್ಕೆ ಬಿಯರ್ ಅಂಗಡಿ ಮಾಲೀಕನಿಗೆ ಸೇಲ್ – ಕಹಳೆ ನ್ಯೂಸ್

ನವದೆಹಲಿ: ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ 28 ವರ್ಷದ ಭಾರತೀಯ ಮಹಿಳೆಯನ್ನು ಪೋರ್ಚುಗಲ್‌ಗೆ ಕರೆದೊಯ್ದು, ಬಳಿಕ ಬಿಯರ್ ಅಂಗಡಿ ಮಾಲೀಕನಿಗೆ ಮಾರಾಟ ಮಾಡಿರುವ ಆಘಾತಕಾರಿ ಆರೋಪ ಕೇಳಿಬಂದಿದೆ. ನಾಗ್ಪುರ ಮೂಲದ ಈ ಮಹಿಳೆ ಇನ್‌ಸ್ಟಾಗ್ರಾಮ್ ಮೂಲಕ ಪುಣೆಯಲ್ಲಿರುವ ‘ವಿ ಮೈಗ್ರೇಟ್’ ಎಂಬ ಸಲಹಾ ಸಂಸ್ಥೆಯನ್ನು ಸಂಪರ್ಕಿಸಿದ್ದರು. ಪೋರ್ಚುಗಲ್‌ನಲ್ಲಿ ಕ್ಯಾಷಿಯರ್ ಕೆಲಸ ಕೊಡಿಸುವುದಾಗಿ ಏಜೆನ್ಸಿಯವರು ಭರವಸೆ ನೀಡಿದ್ದರು. ತಿಂಗಳಿಗೆ 1.5 ಲಕ್ಷ ರೂ. ಸಂಬಳ ಹಾಗೂ ದಿನಕ್ಕೆ 8...
ಬೆಂಗಳೂರುರಾಜ್ಯಸುದ್ದಿ

ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದರಲ್ಲಿ, ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ಅವರ ಸುದೀರ್ಘ ಮನವೊಲಿಕೆಯ ಬಳಿಕ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ ಅಂದರೆ ಆಗಸ್ಟ್ 14 ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನಿಸಿದ್ದರು. ಈಗ ಯಾವುದೇ ಒತ್ತಡವಿಲ್ಲದೆ,...
ಬೆಂಗಳೂರುರಾಜ್ಯಸುದ್ದಿ

ಸಲಿಂಗ ಪ್ರೀತಿಗೆ ಕುಟುಂಬದ ವಿರೋಧ; ಮನನೊಂದು ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಯುವತಿಯರು – ಕಹಳೆ ನ್ಯೂಸ್

ಬೆಂಗಳೂರು: ಸಲಿಂಗ ಪ್ರೀತಿಗೆ ಕುಟುಂಬದವರು ಒಪ್ಪದ ಕಾರಣ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ  ಯಲಹಂಕದ ಶಿವನಹಳ್ಳಿಯಲ್ಲಿ  ನಡೆದಿದೆ. ಸಿರ್ಜನಾ (22) ಮತ್ತು ರೀಟಾ (23) ಮೃತ ಯುವತಿಯರು. ಇಬ್ಬರೂ ಬೆಂಗಳೂರಿನಲ್ಲಿ ಬೇರೆ ಬೇರೆ ಅಪಾರ್ಟ್‌ಮೆಂಟ್‌ಗಳಲ್ಲಿ ಮನೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಇಬ್ಬರೂ ಸಂಬಂಧಿಕರಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗುವಂತೆ ಕುಟುಂಬದಿಂದ ಒತ್ತಡವಿತ್ತು. ಆದರೆ, ಇವರಿಬ್ಬರೂ ಸಲಿಂಗಕಾಮಿಗಳಾಗಿದ್ದು ಪರಸ್ಪರ ಪ್ರೀತಿಸುತ್ತಿದ್ದರು. ಈ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಹೋಟೆಲ್‌ಗಳ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳ ದಾಳಿ; 31 ಲೀಟರ್ ಎಕ್ಸ್‌ಪೈರಿ ಹಾಲು ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಹೋಟೆಲ್‌ಗಳಲ್ಲಿ (Food Safety) ಆಹಾರದ ಗುಣಮಟ್ಟ ಮತ್ತು ಸುರಕ್ಷತೆ ಬಗ್ಗೆ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಫುಡ್ ಸೇಫ್ಟಿ ಇಲಾಖೆ (Bengaluru) ಪರಿಶೀಲನೆಗೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಬೆಂಗಳೂರಿನ ಪ್ರಸಿದ್ಧ ಖಾಸಗಿ ಹೋಟೆಲ್‌ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹೋಟೆಲ್‌ನಲ್ಲಿ ಅವಧಿ ಮೀರಿದ 31...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪತ್ನಿಗೆ ರೀಲ್ಸ್ ಹುಚ್ಚು, ಊಟ ಹಾಕದಿದ್ದಕ್ಕೆ ಕೊಲೆ; ಶವ ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಪತಿ ಲಾಕ್‌ – ಕಹಳೆ ನ್ಯೂಸ್

ಬೆಂಗಳೂರು: ಕುಂಬಳಗೋಡು ಬಳಿ ಪತ್ನಿಯನ್ನು ಕೊಲೆ ಮಾಡಿ,  ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಪ್ರಕರಣದಲ್ಲಿ  ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದಲ್ಲಿ ಸಿಕ್ಕಿಬಿದ್ದ ಧೀರಜ್ ಕುಮಾರ್ (24), ವಿಚಾರಣೆ ವೇಳೆ ಕೊಲೆಗೆ ಕಾರಣ ಏನು ಎಂಬುದನ್ನು ಬಿಚ್ಚಿಟ್ಟಿದ್ದಾನೆ. ಕುಂಬಳಗೋಡು ಗೇರುಪಾಳ್ಯದಲ್ಲಿ ಜುಲೈ 27ರಂದು ಪತ್ನಿ ರೀಮಾ ಕುಮಾರಿಯನ್ನು ಕೊಲೆ ಮಾಡಿದ್ದ ಧೀರಜ್ ಬಳಿಕ ಬಿಹಾರಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಕೆಲವು ದಿನಗಳ ನಂತರ ರೀಮಾ ಸ್ನೇಹಿತೆ ಆಕೆಗೆ ಕರೆ ಮಾಡಿದರೂ ಫೋನ್‌ ರಿಸೀವ್‌...
ಬೆಂಗಳೂರುರಾಜ್ಯಸುದ್ದಿ

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ – ಕಹಳೆ ನ್ಯೂಸ್

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಥಾರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ  ತಾಲೂಕಿನ ಕಂಬಾಳು  ಗ್ರಾಮದ ಬಳಿ ನಡೆದಿದೆ. ಪವನ್, ದೀಪಕ್ ಮೃತರು. ಕಳೆದ ರಾತ್ರಿ ಸ್ನೇಹಿತನ ಹುಟ್ಟುಹಬ್ಬ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕೆರೆಯ ರಸ್ತೆಯಿಂದ ಚಾಲಕನ ನಿಯಂತ್ರಣ ತಪ್ಪಿ ಥಾರ್‌ ಜೀಪ್‌ ಗದ್ದೆಗೆ ಬಿದ್ದಿದೆ. ರಸ್ತೆಯಿಂದ ನಾಲ್ಕೈದು ಬಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ...
1 6 7 8 9 10 364
Page 8 of 364