ಚಿನ್ನಸ್ವಾಮಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್ಸಿಬಿ-ಕಹಳೆ ನ್ಯೂಸ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್ಸಿಬಿ ತಲಾ 25 ಲಕ್ಷ ರೂ. ಪರಿಹಾರಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ. ಈ ಸಂಬಂಧ ಆರ್ಸಿಬಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಜೂ.4 2025ರ ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ, ಅವರು ನಮ್ಮ...







