Wednesday, March 18, 2026

ರಾಷ್ಟ್ರೀಯ

ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಆಗಸ್ಟ್ 18ರಂದು ಚೀನಾದ ‘ವಿದೇಶಾಂಗ ಸಚಿವ ವಾಂಗ್ ಯಿ’ ಭಾರತಕ್ಕೆ ಆಗಮನ -ಕಹಳೆ ನ್ಯೂಸ್

ನವದೆಹಲಿ : ಹಿಮಾಲಯದಲ್ಲಿನ ವಿವಾದಿತ ಗಡಿ ಕುರಿತು ಮಾತುಕತೆ ನಡೆಸಲು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಆಗಸ್ಟ್ 18-20 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಆಗಸ್ಟ್ 16 ರಂದು ಹೇಳಿಕೆಯಲ್ಲಿ ತಿಳಿಸಿದೆ. ನವದೆಹಲಿಯ ಆಹ್ವಾನದ ಮೇರೆಗೆ ವಾಂಗ್ ಚೀನಾ ಮತ್ತು ಭಾರತದ ವಿಶೇಷ ಪ್ರತಿನಿಧಿಗಳ ನಡುವೆ ಗಡಿ ಪ್ರಶ್ನೆಯ ಕುರಿತು 24 ನೇ ಸುತ್ತಿನ ಮಾತುಕತೆ ನಡೆಸಲಿದ್ದಾರೆ. 2020 ರಲ್ಲಿ ಗಡಿಯಲ್ಲಿ ಭಾರತ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಧರ್ಮಸ್ಥಳದ ಕುರಿತು ಅಪಪ್ರಚಾರ; ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭ -ಕಹಳೆ ನ್ಯೂಸ್

ಬೆಂಗಳೂರು : ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್‌.ಆರ್.ವಿಶ್ವನಾಥ್ ನೇತೃತ್ವದಲ್ಲಿ ಇಂದಿನಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭವಾಗಿದೆ. ಬೆಂಗಳೂರಿನ ನೆಲಮಂಗಲ ಟೋಲ್‌ ಮೂಲಕ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್ ಅವರು ಶ್ರೀಕ್ಷೇತ್ರಕ್ಕೆ ಪ್ರಯಾಣ ಆರಂಭಿಸಲಿದ್ದಾರೆ. "ಧರ್ಮಸ್ಥಳ ಚಲೋ" ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಪೂಜಾ ವಿಧಿವಿಧಾನ ನೆರವೇರಿಸಿ ನೂರಾರು ವಾಹನಗಳ ಅಭಿಯಾನವನ್ನು ಆರಂಭಿಸಲಾಯಿತು. ಅಪಪ್ರಚಾರ ಖಂಡಿಸಿ ಯಾತ್ರೆ ನಡೆಯುತ್ತಿದ್ದು,...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ -ಕಹಳೆ ನ್ಯೂಸ್

ಬೆಂಗಳೂರು: ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ದುರಂತದಲ್ಲಿ ಸಜೀವ ದಹನವಾದ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ‘ಸಿಲಿಂಡರ್’ ಸ್ಪೋಟಕ್ಕೆ 6 ಮನೆಗಳು ಛಿದ್ರ ಛಿದ್ರ, 12 ಮಂದಿಗೆ ಗಂಭೀರ ಗಾಯ, -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟಗೊಂಡು 6 ಮನೆಗಳು ಛಿದ್ರ ಛಿದ್ರವಾಗಿದ್ದು, ಓರ್ವ ಬಾಲಕ ಮೃತಪಟ್ಟು 12 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಚಿನ್ನಯ್ಯಪಾಳ್ಯದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಒಂದು ಸಿಲಿಂಡರ್ ಸ್ಪೋಟಕ್ಕೆ 10 ಮನೆಗಳು ಛಿದ್ರ ಛಿದ್ರವಾಗಿದೆ ಎನ್ನಲಾಗಿದೆ .ಸಿಲಿಂಡರ್ ಸ್ಪೋಟಕ್ಕೆ ಓರ್ವ ಮಹಿಳೆಯ ಕಾಲು ಕೂಡ ಕಟ್ ಆಗಿದೆ. ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಮುಬಾರಕ್ (8) ಮೃತಪಟ್ಟಿದ್ದಾನೆ. 12 ಮಂದಿ ಗಾಯಗೊಂಡು...
ಜಿಲ್ಲೆದೆಹಲಿರಾಜ್ಯಸುದ್ದಿ

ಸತತ 12ನೇ ಸ್ವಾತಂತ್ರ್ಯೋತ್ಸವದಂದು ಭಾಷಣ: ಇಂದಿರಾ ಗಾಂಧಿ ದಾಖಲೆ ಮುರಿದ ಪಿಎಂ ಮೋದಿ -ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಕೆಂಪುಕೋಟೆ ಬಳಿ ಸತತ 12ನೇ ಸಲ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪಿಎಂ, ದಿವಂಗತ ಇಂದಿರಾ ಗಾಂಧಿ ಅವರ ದಾಖಲೆಯನ್ನು ಮುರಿದಿದ್ದಾರೆ. ಇದರೊಂದಿಗೆ, ಸತತವಾಗಿ ಹೆಚ್ಚು ಸಲ ಸ್ವಾತಂತ್ರ್ಯೋತ್ಸವದಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿಗಳ ಸಾಲಿನಲ್ಲಿ ಜವಾಹರಲಾಲ್‌ ನೆಹರೂ ನಂತರದ ಸ್ಥಾನಕ್ಕೆ ಏರಿದ್ದಾರೆ. ಇಂದಿರಾ ಅವರು, 1966ರ ಜನವರಿಯಿಂದ 1977ರ ಮಾರ್ಚ್‌ ವರೆಗೆ ಹಾಗೂ 1980ರ ಜನವರಿಯಿಂದ 1984ರ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

79ನೇ ಸ್ವಾತಂತ್ರ್ಯ ದಿನಾಚರಣೆ : ನಾಡಿನ ಜನತೆಗೆ `CM ಸಿದ್ದರಾಮಯ್ಯ’ ಸಂದೇಶ.- ಕಹಳೆ ನ್ಯೂಸ್

ಬೆಂಗಳೂರು : ದೇಶಾದ್ಯಂತ ಇಂದು 79 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಇಂದು ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದು, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಂದೇಶ ನೀಡಿದ್ದಾರೆ. ಇಂದು ಭಾರತವು ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಮುಕ್ತಗೊಂಡ ಶುಭದಿನ. ಮಹಾತ್ಮ ಗಾಂಧೀಜಿ, ಜವಾಹರಲಾಲ್‌ ನೆಹರು, ಸರ್ದಾರ್‌ ವಲ್ಲಭಭಾಯಿ ಪಟೇಲ್, ಸುಭಾಷ್‌ ಚಂದ್ರ ಬೋಸ್, ಮೌಲಾನಾ ಅಬುಲ್‌ ಕಲಾಂ ಅಜಾದ್‌ ಮುಂತಾದ‌ ಕೆಚ್ಚೆದೆಯ ಅಪ್ರತಿಮ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ದಕ್ಷಿಣಕನ್ನಡದ ಹೆಸರು ಮಂಗಳೂರು ಎಂದಾಗಲಿ ; ಅಧಿವೇಶನದಲ್ಲಿ ಆಗ್ರಹಿಸಿದ ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರು : ಕೇವಲ ಒಂದೆರಡು ತಿಂಗಳಲ್ಲಿಯೇ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲು ತೋರಿದ ಉತ್ಸಾಹವನ್ನು ದಕ್ಷಿಣಕನ್ನಡದ ಹೆಸರನ್ನು ಮಂಗಳೂರು ಎಂದು ಬದಲಿಸುವಲ್ಲಿಯೂ ರಾಜ್ಯ ಸರ್ಕಾರ ತೋರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಗ್ರಹಿಸಿದರು. ಗಮನ ಸೆಳೆಯುವ ವೇಳೆ ನಡೆದ ಚರ್ಚೆಯಲ್ಲಿ ಮಾತನಾಡಿದ ಶಾಸಕರು, ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾಧಿಕಾರಿಗಳಿಂದ ವರದಿ ಬರಲು ಬಾಕಿ ಇದ್ದು ಪ್ರಸ್ತಾವನೆ ಸ್ವೀಕೃತಗೊಂಡಿರುವುದಿಲ್ಲ ಎಂದು ಸರ್ಕಾರ ಹೇಳಿದೆ....
ಜಮ್ಮು ಮತ್ತು ಕಾಶ್ಮೀರಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟ; 12 ಮೃತದೇಹಗಳು ಪತ್ತೆ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ -ಕಹಳೆ ನ್ಯೂಸ್

ಜಮ್ಮು: ಗುರುವಾರ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಮಚೈಲ್ ಮಾತಾ ಯಾತ್ರೆಯ ಮಾರ್ಗಮಧ್ಯೆಯ ದೂರದ ಹಳ್ಳಿಯಲ್ಲಿ ಸಂಭವಿಸಿದ ಭಾರಿ ಮೇಘಸ್ಫೋಟದಲ್ಲಿ ಕನಿಷ್ಠ 12 ಜನರು ಸಾವಿಗೀಡಾಗಿದ್ದು, ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯಕ್ಕೆ ಹೋಗುವ ಮಾರ್ಗಮಧ್ಯೆ ವಾಹನ ಸಂಚಾರಕ್ಕೆ ಯೋಗ್ಯವಾದ ಕೊನೆಯ ಗ್ರಾಮವಾದ ಚಸೋಟಿಯಲ್ಲಿ ಮೇಘಸ್ಫೋಟ ಸಂಭವಿಸಿದೆ. ಘಟನೆಯ ನಂತರ ದೇವಾಲಯಕ್ಕೆ ವಾರ್ಷಿಕ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ಈಗ ಪರಿಸ್ಥಿತಿಯ ಮೇಲೆ ಸಂಪೂರ್ಣವಾಗಿ ಗಮನಹರಿಸಿದ್ದಾರೆ. ದೊಡ್ಡ ಪ್ರಮಾಣದ...
1 86 87 88 89 90 320
Page 88 of 320