ಮನೆಗೆ ನುಗ್ಗಿ 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು -ಕಹಳೆ ನ್ಯೂಸ್
ಬೆಂಗಳೂರು ದಕ್ಷಿಣ: ಮನೆಗೆ ನುಗ್ಗಿದ ದುಷ್ಕರ್ಮಿಗಳು 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರಕೆರೆ ಬಳಿ ನಡೆದಿದೆ. ಅರುಣಾ (14) ಕೊಲೆಯಾದ ಬಾಲಕಿ. ಮನೆಯಲ್ಲಿ ತಂದೆ-ತಾಯಿ ಯಾರೂ ಇರದಿದ್ದ ವೇಳೆ ಏಕಾಏಕಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ. ಯಾವ ಕಾರಣಕ್ಕಾಗಿ ಬಾಲಕಿ ಹತ್ಯೆ ನಡೆದಿದೆ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ. ಪೋಷಕರು ಮನೆಗೆ ಬಂದು ನೋಡುವಷ್ಟರಲ್ಲಿ ಮಗಳು...







