ಗಣರಾಜ್ಯೋತ್ಸವಕ್ಕೆ 2 ದಿನ ಬಾಕಿ : ಪಂಜಾಬ್, ಜಮ್ಮು ಕಾಶ್ಮೀರ, ರಾಜಸ್ಥಾನ ಗಡಿಗಳಲ್ಲಿ ಹೈ ಅಲರ್ಟ್ – ಕಹಳೆ ನ್ಯೂಸ್
ನವದೆಹಲಿ: ಗಣರಾಜ್ಯೋತ್ಸವಕ್ಕೆ ಇನ್ನು ಎರಡು ದಿನಗಳು ಬಾಕಿ ಉಳಿದಿರುವ ಹೊತ್ತಿನಲ್ಲಿ ದೇಶದ ಗಡಿಭಾಗಗಳಲ್ಲಿ ಹೊಸ ಭದ್ರತಾ ಎಚ್ಚರಿಕೆ ಹೊರಡಿಸಲಾಗಿದೆ. ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಹಾಗೂ ರಾಜಸ್ಥಾನ ಗಡಿಪ್ರದೇಶಗಳಲ್ಲಿ ಡ್ರೋನ್, ಪ್ಯಾರಾಗ್ಲೈಡರ್ ಮತ್ತು ಹ್ಯಾಂಗ್ ಗ್ಲೈಡರ್ ಮೂಲಕ ದಾಳಿ ನಡೆಸುವ ಸಾಧ್ಯತೆಯ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಗುಪ್ತಚರ ಮಾಹಿತಿಯ ಪ್ರಕಾರ, ಭಯೋತ್ಪಾದಕರು ಡ್ರೋನ್ಗಳ ಮೂಲಕ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಭಾರತಕ್ಕೆ ಅಕ್ರಮವಾಗಿ ತರಬಹುದು ಎಂಬ ಅನುಮಾನ ವ್ಯಕ್ತವಾಗಿದೆ....







