Wednesday, March 18, 2026

ಬೆಂಗಳೂರು

ದೆಹಲಿಬೆಂಗಳೂರುರಾಜಕೀಯರಾಜ್ಯಸುದ್ದಿ

ನನ್ನಲ್ಲಿ ಸಾಕಷ್ಟು ಹಣವಿಲ್ಲ.. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ – ಕಹಳೆ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಹೈಕಮಾಂಡ್‌ಗೆ ತಿಳಿಸಿದ್ದೇನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿಕ ಹಣವಿಲ್ಲ. ಆದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ ಎಂದು ತಿಳಿಸಿದ್ದಾರೆ. ಒಂದು ವಾರ ಅಥವಾ...
ಕ್ರೈಮ್ಬೆಂಗಳೂರುಸುದ್ದಿ

ಬೆಂಗ್ಳೂರಲ್ಲಿ ಪೋರ್ನ್‌ ದಂಧೆ; ಹಣಕ್ಕಾಗಿ ತಮ್ಮದೇ ವೀಡಿಯೋಗಳನ್ನ ಪೋರ್ನ್‌ ಸೈಟ್‌ನಲ್ಲಿ ಅಪ್ಲೋಡ್‌ ಮಾಡ್ತಿದ್ದ ಜೋಡಿ! – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹಣ ಗಳಿಸುವ ಸಲುವಾಗಿ ಎಂತಹ ಕೆಲಸಗಳನ್ನ ಮಾಡ್ತಾರೆ ಅನ್ನೋದು ಬೆಂಗಳೂರು (Bengaluru) ಮಹಾನಗರದಲ್ಲಿ ಆಗಾಗ್ಗೆ ಬೆಳಕಿಗೆ ಬರುತ್ತಿದೆ. ಅದೇ ರೀತಿ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಲೈಂಗಿಕ ಚಟುವಟಿಕೆ ನಡೆಸಿ, ಚಿತ್ರೀಕರಿಸಿದ ವೀಡಿಯೋವನ್ನು ಪೋರ್ನ್‌ ವೆಬ್‌ಸೈಟ್‌ಗೆ ಅಪ್ಲೋಡ್‌ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಗುತ್ತಿಗೆದಾರ ಅಮರ್‌ನಾಥ್‌ ಎಂಬವರು ಐಟಿ ಆಕ್ಟ್ (ಮಾಹಿತಿ ತಂತ್ರಜ್ಞಾನ ಕಾಯ್ದೆ) (IT Act) ಅಡಿಯಲ್ಲಿ ದೂರು ನೀಡಿದ್ದು, ಜ್ಞಾನಭಾರತಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಲೋಕಸಭೆ ಚುನಾವಣಾ ಸಮರ : ಇಂದಿನಿಂದ ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ – ಕಹಳೆ ನ್ಯೂಸ್

ಬೆಂಗಳೂರು : ಲೋಕಸಭಾ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಇಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು:ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ : ಶಂಕಿತ ಉಗ್ರನ ನಿವಾಸ ಸೇರಿ, ಚೆನ್ನೈ, ಕನ್ಯಾಕುಮಾರಿ, ಭಟ್ಕಳದಲ್ಲಿ ಎನ್‍ಐಎ ರೈಡ್ – ಕಹಳೆ ನ್ಯೂಸ್

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಸ್ಫೋಟ ಸಂಬಂಧ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಎನ್‍ಐಎ ಅಧಿಕಾರಿಗಳು ಶೋಧ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಭಟ್ಕಳದಲ್ಲಿ ಶಂಕಿತ ಉಗ್ರ ಇಕ್ಬಾಲ್ ಭಟ್ಕಳ್ ಪುತ್ರ ಅಬ್ದುಲ್ ರಬಿ ನಿವಾಸದ ಮೇಲೆ ಸ್ಥಳೀಯ ಪೊಲೀಸರೊಂದಿಗೆ ಬೆಂಗಳೂರಿನ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಂಕಿತ ವ್ಯಕ್ತಿ ಹಾಗೂ ಅಬ್ದುಲ್ ರಬಿ ಹೋಲಿಕೆ ಒಂದೇ ರೀತಿ ಇರುವುದರಿಂದ ದಾಳಿ ನಡೆದಿದೆ ಎನ್ನಲಾಗಿದೆ....
ಬೆಂಗಳೂರುಶಿಕ್ಷಣಸುದ್ದಿ

ಪ್ರಥಮ ಪಿಯು ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು, ಮಾ 27: ಪ್ರಥಮ ಪಿಯು ಪೂರಕ ಪರೀಕ್ಷೆ ಮೇ 20 ರಿಂದ 31ರವರೆಗೆ ನಡೆಯಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಶೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿಯ ಪ್ರಕಟನೆಯನ್ನು ಮಾಡಿದ್ದು, ಜೂನ್ ‍6 ರಂದು ಪರೀಕ್ಷೆಯ ಫಲಿತಾಂಶ ಪ್ರಕಟವಾಗಬೇಕೆಂದು ಸೂಚನೆಯನ್ನು ನೀಡಿದೆ. ಪಿಯುಸಿ ಪೂರಕ ಪರೀಕ್ಷೆಯನ್ನು ನಡೆಸಿಕೊಡುವ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಉಪನಿರ್ದೇಶಕರಿಗೆ ನೀಡಲಾಗಿದೆ. ಮಾರ್ಚ್ 30ಕ್ಕೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗುತ್ತಿದ್ದು ಈ ಸಮಯದಲ್ಲಿ...
ಬೆಂಗಳೂರುಮೈಸೂರುರಾಜಕೀಯಸುದ್ದಿ

ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ, ಸಿಎಂ ತವರಲ್ಲೇ ವಿಜಯೇಂದ್ರ ಕಾರ್ಯಾಚರಣೆ ಶುರು : ಪಕ್ಷ ಬಿಡುತ್ತಿದ್ದ ಮುಖಂಡನ ಮನವೊಲಿಸುವಲ್ಲಿ ಬಿಜೆಪಿ ಯಶಸ್ವಿ – ಕಹಳೆ ನ್ಯೂಸ್

ಒಂದೆಡೆ ಮೈಸೂರಿನ ರೆಸಾರ್ಟ್​ನಲ್ಲಿ ಕುಳಿತುಕೊಂಡು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಗಾಳ ಹಾಕುತ್ತಿದ್ದರೆ, ಅತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮೈಸೂರಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ ಹೂಡಲು ಇಂದಿಡೀ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಲಿದ್ದಾರೆ. ಮೈಸೂರು, ಮಾರ್ಚ್ 27: ಲೋಕಸಭೆ ಚುನಾವಣೆ (Lok Sabha Elections) ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಹೆಚ್​​ವಿ ರಾಜೀವ್ ನಂತರ ಮತ್ತೊಬ್ಬ ಆಪ್ತನಿಗೆ ಮೈಸೂರಿನ ರೆಸಾರ್ಟ್​ನಲ್ಲೇ...
ಬೆಂಗಳೂರುರಾಜ್ಯಸುದ್ದಿ

SSLC Exam: ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ..! 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ನೋಂದಣಿ – ಕಹಳೆ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳ ಪಾಲಿನ ಪ್ರಮುಖ ಘಟ್ಟಗಳಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯೂ ಒಂದು. ವಿದ್ಯಾರ್ಥಿ ಸಮೂಹಕ್ಕೆ ಮಾತ್ರವಲ್ಲ ಅವರ ಪೋಷಕರು ಹಾಗೂ ಶಿಕ್ಷಕರಿಗೂ ಇದು ಅಗ್ನಿಪರೀಕ್ಷೆಯೇ ಹೌದು. ಇಂದಿನಿಂದ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಬೋರ್ಡ್‌ ಪರೀಕ್ಷೆ ಆರಂಭವಾಗಲಿದ್ದು, ಶಾಲಾ ಶಿಕ್ಷಣ ಇಲಾಖೆ ಸಹ ಸಜ್ಜಾಗಿದೆ. ಇದರ ಮಧ್ಯೆ ಖಾಸಗಿ ಶಾಲೆಗಳಿಂದ ಮತ್ತೊಂದು ಖ್ಯಾತೆ ಶುರುವಾಗಿದೆ. ಈ ಕುರಿತ ಒಂದು ಕಂಪ್ಲೀಟ್‌ ರಿಪೋರ್ಟ್ ಇಲ್ಲಿದೆ. ರಾಜ್ಯದಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ಮುಕ್ತಾಯವಾದ ಬೆನ್ನಲ್ಲೇ...
ಉತ್ತರಕನ್ನಡಬೆಂಗಳೂರುರಾಜಕೀಯಸುದ್ದಿ

BJP 5ನೇ ಪಟ್ಟಿ ರಿಲೀಸ್‌ ; ಉತ್ತರ ಕನ್ನಡದಲ್ಲಿ ಕಾಗೇರಿ, ಬೆಳಗಾವಿಯಲ್ಲಿ ಶೆಟ್ಟರ್‌, ಚಿಕ್ಕಬಳ್ಳಾಪುರ ಸುಧಾಕರ್‌ ಸ್ಪರ್ಧೆ – ಕಹಳೆ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣೆಗೆ (Lok Sabha Election 2024) ಬಿಜೆಪಿಯು (BJP) ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿಯಿಂದ ಜಗದೀಶ್‌ ಶೆಟ್ಟರ್‌ (Jagadeesh Shettar), ರಾಯಚೂರು- ರಾಜಾ ಅಮರೇಶ್ವರ ನಾಯಕ್‌, ಉತ್ತರ ಕನ್ನಡ- ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri), ಚಿತ್ರದುರ್ಗದಿಂದ ಡಾ. ಕೆ.ಸುಧಾಕರ್‌ (Dr.K.Sudhakar) ಅವರಿಗೆ ಟಿಕೆಟ್‌ ನೀಡಿದೆ. ಚಿಕ್ಕಬಳ್ಳಾಪುರಕ್ಕೆ ಹೈಕಮಾಂಡ್ ಕೋಟಾದಲ್ಲಿ ಟಿಕೆಟ್ ಹಂಚಿಕೆ ಮಾಡಲಾಗಿದೆ. ಡಾ. ಕೆ.ಸುಧಾಕರ್‌ಗೆ...
1 126 127 128 129 130 213
Page 128 of 213