ಡಿ.8ರಿಂದ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಾಹನಗಳಿಗೆ ದುಬಾರಿ ಪ್ರವೇಶ ಶುಲ್ಕ ಜಾರಿ
ಬೆಂಗಳೂರು: ಅನುಮತಿಸಿದ ಉಚಿತ ಸಮಯಕ್ಕಿಂತ ಹೆಚ್ಚು ಅವಧಿ ತಂಗುವ ವಾಹನಗಳಿಗೆ ಡಿ. 8ರಿಂದ ಪ್ರವೇಶ ಶುಲ್ಕ ವಿಧಿಸಲಾಗುವುದು ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿಯಮಿತ ಹೇಳಿದೆ. ಎರಡೂ ಟರ್ಮಿನಲ್‌ಗಳ ಪಿಕಪ್ ವಲಯದಲ್ಲಿ ಎಲ್ಲಾ ಖಾಸಗಿ ವಾಹನಗಳು (ಬಿಳಿ ಬೋರ್ಡ್) 8 ನಿಮಿಷ ಉಚಿತವಾಗಿ ಬಳಕೆ ಮಾಡಬಹುದು. ಇದಾದ ಬಳಿಕ ಕಾರುಗಳಿಗೆ 8-13ನಿಮಿಷದ ವರೆಗೆ ₹ 150 ಹಾಗೂ 13-18ನಿಮಿಷದವರೆಗೆ ₹300 ಶುಲ್ಕ ವಿಧಿಸಲಾಗುತ್ತದೆ. ಅದಕ್ಕಿಂತ ಹೆಚ್ಚು ಸಮಯ ನಿಲ್ಲಿಸಿದರೆ ಸಮೀಪದ...







