ಓಮನ್‍ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ “ಇಂಗ್ಲಿಷ್”- ಎಂಕ್ಲೆಗ್ ಬರ್ಪುಜಿ ಬ್ರೋ’ ತುಳು ಸಿನಿಮಾ ದುಬೈಯಲ್ಲಿ ಹೌಸ್ ಫುಲ್-ಕಹಳೆ ನ್ಯೂಸ್
ಮಂಗಳೂರು : ಮಂಗಳೂರು-ಬೆಂಗಳೂರು-ಮೈಸೂರು ಸೇರಿದಂತೆ ಕರ್ನಾಟಕದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ “ಇಂಗ್ಲಿಷ್”- ಎಂಕ್ಲೆಗ್ ಬರ್ಪುಜಿ ಬ್ರೋ’ ಗಿಲ್ಬಿಸ್ಟಿಕ್ ಕಾಮಿಡಿ ಚಿತ್ರ ಇದೀಗ ದೂರದ ಓಮನ್ ಹಾಗೂ ಯುಎಇಗೆ ಭರ್ಜರಿ ಎಂಟ್ರಿ ನೀಡಿದ್ದು, ಅಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅಕ್ಮೆ(ACME ) ಮೂವೀಸ್ ಇಂಟರ್‍ನ್ಯಾಷನಲ್ ಲಾಂಛನದಲ್ಲಿ ನಿರ್ಮಾಣವಾಗಿರುವ ದುಬೈಯ ಖ್ಯಾತ ಉದ್ಯಮಿ, ಕನ್ನಡ ಸಿನಿಮಾ ನಿರ್ಮಾಪಕರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ...







