ರಾಸಲೀಲೆ ಪ್ರಕರಣ; ರಮೇಶ್ ಜಾರಕಿಹೊಳಿ ರಾಜೀನಾಮೆ-ಕಹಳೆ ನ್ಯೂಸ್
ಬೆಂಗಳೂರು : ಕೆಲಸದ ಕೊಡಿಸುವ ನೆಪದಲ್ಲಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾನು ಯಾವ ತಪ್ಪನ್ನು ಮಾಡಿಲ್ಲ, ನಾನೇಕೆ ರಾಜೀನಾಮೆ ಕೊಡಲಿ ಎಂದಿದ್ದ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ಬುಧವಾರ ರಾಜೀನಾಮೆ ನೀಡಿದ್ದಾರೆ. ಸಚಿವರು ಯುವತಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿಯ ದಿನೇಶ್ ಕಲ್ಲಹಳ್ಳಿ ಅವರು ಸಚಿವ...







