7 ಕೋಟಿ ಹಣ ದರೋಡೆ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್, ಬಂಧಿತರ ಸಂಖ್ಯೆ 7ಕ್ಕೆ – ಕಹಳೆ ನ್ಯೂಸ್
ಬೆಂಗಳೂರು -ಹಾಡುಹಗಲೇ ನಗರದಲ್ಲಿ 7 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಿಭಾಗದ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ರಾಕೇಶ್ ಬಂಧಿತ ಏಳನೇ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಟ್ರಾವೆಲ್ಸ್ ಮಾಲೀಕ, ದರೋಡೆ ಕೃತ್ಯದ ಪ್ರಮುಖ ಆರೋಪಿ ರವಿಯ ಸಂಬಂಧಿ. ಬಂಧಿತರ ಸಂಖ್ಯೆ 7ಕ್ಕೇರಿದ್ದು, ತಲೆ ಮರೆಸಿಕೊಂಡಿರುವ ಮತ್ತಿಬ್ಬರ ಬಂಧನಕ್ಕಾಗಿ ಪೊಲೀಸರು ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ಶೋಧ ನಡೆಸುತ್ತಿದ್ದಾರೆ. ಬಂಧಿತರಿಂದ ಈತನಕ ಒಟ್ಟು 6.29 ಕೋಟಿ...







