ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತ – ಕಹಳೆ ನ್ಯೂಸ್
ಚೆನ್ನೈ, ಜುಲೈ 8: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ವಿಕ್ರಮ್ ಅಥವಾ ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿರುವ ನಟನ ಅಸಲಿ ಹೆಸರು ಕೆನಡಿ ಜಾನ್ ವಿಕ್ಟರ್. ತಮಿಳು ಚಿತ್ರರಂಗದಲ್ಲಿ ಹಲವು ಏಳುಬೀಳು ಕಂಡಿರುವ ವಿಕ್ರಮ್ ಏಳು ಫಿಲಂಫೇರ್ ಪ್ರಶಸ್ತಿ ಪಡೆದಿದ್ದು,...







