ಕಾಂತಾರ ಚಾಪ್ಟರ್ 1 ; ಸಕ್ಸಸ್ ಬೆನ್ನಲ್ಲೇ ಕಟೀಲು ಅಮ್ಮನ ದರ್ಶನ ಪಡೆದ ವಿಜಯ್ ಕಿರಗಂದೂರು-ಕಹಳೆ ನ್ಯೂಸ್
ಮಂಗಳೂರು: ಕಾಂತಾರ ಚಾಪ್ಟರ್ 1 ಯಶಸ್ವಿ ಹಿನ್ನೆಲೆಯಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು , ಕರಾವಳಿ ದೇವಿಯ ಮೊರೆ ಹೋಗಿದ್ದಾರೆ. ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದ ‘ಕಾಂತಾರ’ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಶ್ರೀ ದುರ್ಗಾಪರಮೇಶ್ವರಿ ದೇವಿ ದರ್ಶನ ಪಡೆದಿದ್ದಾರೆ. ಕಟೀಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನಕ್ಕೆ ಸ್ನೇಹಿತರೊಂದಿಗೆ ವಿಜಯ್ ಕಿರಗಂದೂರು ಭೇಟಿ ನೀಡಿದರು. ಕ್ಷೇತ್ರದಲ್ಲೇ ಅನ್ನ ಪ್ರಸಾದ ಸ್ವೀಕರಿಸಿದರು. ಇತ್ತ ಕಾಂತಾರ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಮುಂಬೈನ...






