Friday, March 6, 2026

ಸಿನಿಮಾ

ಅಂಕಣಸಿನಿಮಾಸುದ್ದಿ

ಕಾಂತಾರ ಚಾಪ್ಟರ್‌ 1ಗೆ ಪ್ರೇಕ್ಷಕರ ಮೆಚ್ಚುಗೆ ಕಂಡು ರಿಷಬ್‌ ಶೆಟ್ಟಿ ಪತ್ನಿ ಭಾವುಕ ; ಅಪ್ಪಿಕೊಂಡು ಸಮಾಧಾನಪಡಿಸಿದ ರಿಷಬ್‌-ಕಹಳೆ ನ್ಯೂಸ್

ನಟ-ನಿರ್ದೇಶಕ ರಿಷಬ್ ಶೆಟ್ಟಿ  ಅವರ ಕಾಂತಾರ ಚಾಪ್ಟರ್ 1  ಚಿತ್ರವು ಅದ್ದೂರಿಯಾಗಿ ಥಿಯೇಟರ್‌ಗಳಿಗೆ ಲಗ್ಗೆ ಇಟ್ಟಿದೆ. ಸಿನಿಮಾ ಮೂಡಿಬಂದ ರೀತಿ ಹಾಗೂ ಅದಕ್ಕೆ ಪ್ರೇಕ್ಷಕರಿಂದ ವ್ಯಕ್ತವಾಗುತ್ತಿರುವ ಬಾರಿ ಮೆಚ್ಚುಗೆ ಕಂಡು ರಿಷಬ್‌ ಶೆಟ್ಟಿ ಪತ್ನಿ ಭಾವುಕರಾದರು. ಸಿನಿಮಾ ಪ್ರದರ್ಶನದ ಸಮಯದಲ್ಲಿ ರಿಷಬ್‌ ಶೆಟ್ಟಿ ಅವರ ಪತ್ನಿ, ನಟ-ವಿನ್ಯಾಸಕಿ ಪ್ರಗತಿ ಶೆಟ್ಟಿ  ಚಿತ್ರಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ನೋಡಿ ಕಣ್ಣೀರು ಹಾಕಿದರು. ಆಗ ಪತ್ನಿಯನ್ನು ಅಪ್ಪಿಕೊಂಡು ರಿಷಬ್ ಸಮಾಧಾನಪಡಿಸಿದ ದೃಶ್ಯ ಕಂಡುಬಂತು. ನಿಜಕ್ಕೂ...
ಅಂಕಣಅಂತಾರಾಷ್ಟ್ರೀಯಸಿನಿಮಾ

ವಿದೇಶಿ ಸಿನಿಮಾಗಳ ; ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌-ಕಹಳೆ ನ್ಯೂಸ್

ವಾಷಿಂಗ್ಟನ್: ಭಾರತ ಸೇರಿದಂತೆ ವಿದೇಶಗಳ ಮೇಲಿನ ಟ್ರಂಪ್‌ ಸುಂಕ ಸಮರ ಮುಂದುವರಿದಿದೆ. ವಿದೇಶಗಳ ಸಿನಿಮಾಗಳ ಮೇಲೆ ಶೇ.100 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. ಅಮೆರಿಕವು ತನ್ನ ದೇಶದ ಹೊರಗೆ ತಯಾರಾಗುವ ಎಲ್ಲಾ ಚಲನಚಿತ್ರಗಳ ಮೇಲೆ 100% ಸುಂಕವನ್ನು ವಿಧಿಸುತ್ತದೆ ಎಂದು ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ ಘೋಷಿಸಿದ್ದಾರೆ. ಅಮೆರಿಕದ ಚಲನಚಿತ್ರ ವ್ಯವಹಾರವನ್ನು ವಿದೇಶಗಳ ಸ್ಪರ್ಧಿಗಳು ಆಕ್ರಮಿಸಿಕೊಂಡಿದ್ದಾರೆ. ಮಕ್ಕಳಿಂದ ಕ್ಯಾಂಡಿ ಕದಿಯುವ ರೀತಿಯಲ್ಲಿ ಅಮೆರಿಕದ ಚಲನಚಿತ್ರ ನಿರ್ಮಾಣ ವ್ಯವಹಾರವನ್ನು ಇತರೆ...
ರಾಜ್ಯಸಂತಾಪಸಿನಿಮಾಸುದ್ದಿ

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ : ಪ್ರಧಾನಿ ಮೋದಿ ಘೋಷಣೆ – ಕಹಳೆ ನ್ಯೂಸ್

ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಪರಿಹಾರ ಘೋಷಣೆ ಮಾಡಿದ್ದಾರೆ. ಕರೂರ್ ಕಾಲ್ತುಳಿತದ ದುರಂತದಲ್ಲಿ ಮೃತಪಟ್ಟವರ ಕುಟುಮಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ನಡೆದ...
ಜಿಲ್ಲೆರಾಜ್ಯರಾಷ್ಟ್ರೀಯಸಂತಾಪಸಿನಿಮಾಸುದ್ದಿ

ಅಮಾಯಕರ ಜೀವಹಾನಿ ಸುದ್ದಿ ನನ್ನ ಹೃದಯವನ್ನು ಭಾರವಾಗಿಸಿದೆ’ : ಕರೂರ್ ಕಾಲ್ತುಳಿತದ ಬಗ್ಗೆ ನಟ ರಜನಿಕಾಂತ್ ಪ್ರತಿಕ್ರಿಯೆ -ಕಹಳೆ ನ್ಯೂಸ್

ಚೆನ್ನೈ ಶನಿವಾರ ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಕ್ಕಳು ಸೇರಿ 39 ಮಂದಿ ಸಾವನ್ನಪ್ಪಿದ್ದಾರೆ. ಕರೂರ್ ಕಾಲ್ತುಳಿತ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ರಜನಿಕಾಂತ್ ಅವರು, ಕರೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ ಅಮಾಯಕರ ಜೀವಹಾನಿ ಸುದ್ದಿ ನನ್ನ ಹೃದಯವನ್ನು ಭಾರವಾಗಿಸಿದೆ. ನನಗೆ ತುಂಬಾ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ...
ಅಂಕಣಸಿನಿಮಾಸುದ್ದಿ

ಬಿಹಾರ ಮೂಲದ ವ್ಯಕ್ತಿಗಳಿಂದ ಪ್ರಿಯಾಂಕಾ ಉಪೇಂದ್ರ ಮೊಬೈಲ್‌ ಹ್ಯಾಕ್‌-ಕಹಳೆ ನ್ಯೂಸ್

ಬೆಂಗಳೂರು: ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣದ ತನಿಖೆ ನಡೆಸುತ್ತಿರುವ ಸದಾಶಿವನಗರ ಪೊಲೀಸರು ಹ್ಯಾಕರ್‌ಗಳ ಮೂಲ ಪತ್ತೆ ಮಾಡಿದ್ದಾರೆ. ಮೊಬೈಲ್ ಹ್ಯಾಕ್ ಮಾಡಿರುವ ವಂಚಕರು ಬಿಹಾರ ಮೂಲದವರು ಎನ್ನುವುದು ಗೊತ್ತಾಗಿದೆ. ಬಿಹಾರದಿಂದಲೇ ನಾಲ್ಕೈದು ಜನರಿಂದ ಉಪೇಂದ್ರ ದಂಪತಿಯ ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಹಣ ಕೇಳಿದ್ದಾರೆ. ಸುಮಾರು 1.65 ಲಕ್ಷ ರೂ. ಹಣ ಪಡೆದುಕೊಂಡು, ನಾಲ್ಕು ಅಕೌಂಟ್ ಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಆ ನಾಲ್ಕು ಅಕೌಂಟ್...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಸಿನಿಮಾ ಟಿಕೆಟ್ ದರ 200ರೂ. ನಿಗದಿ ಮಾಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ, ಹೈಕೋರ್ಟ್ ತಡೆಯಾಜ್ಞೆ -ಕಹಳೆ ನ್ಯೂಸ್

ಬೆಂಗಳೂರು : ಮಲ್ಟಿಪ್ಲೆಕ್ಸ್‌ ಸೇರಿ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ.ಗಳ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಮಧ್ಯಂತರ ತಡೆ ನೀಡುವ ಕುರಿತಂತೆ ಮನವಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್​ ಏಕ ಸದಸ್ಯ ಪೀಠ ಇಂದು ಈ ಕುರಿತು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ರಾಜ್ಯ ಸರ್ಕಾರ 200 ರೂಪಾಯಿ ಟಿಕೆಟ್ ದರ...
ಅಂಕಣಮುಂಬೈಸಿನಿಮಾಸುದ್ದಿ

ಟಾಕ್ಸಿಕ್‌ ಫೈನಲ್‌ ಶೂಟಿಂಗ್‌ ; ಮುನ್ನ ಲಂಡನ್‌ಗೆ ಹಾರಿದ ಯಶ್!-ಕಹಳೆ ನ್ಯೂಸ್

ಟಾಕ್ಸಿಕ್‌ (Toxic) ಚಿತ್ರದ ಫೈನಲ್‌ ಹಂತದ ಚಿತ್ರೀಕರಣಕ್ಕೂ ಮುನ್ನ ರಾಕಿಂಗ್‌ ಸ್ಟಾರ್‌ ಯಶ್‌  ಲಂಡನ್‌ಗೆ ಹಾರಿದ್ದಾರೆ. ಟಾಕ್ಸಿಕ್ ಸಿನಿಮಾದ ಆ್ಯಕ್ಷನ್ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಲಿವುಡ್‌ನ ಜೆಜೆ ಪರ‍್ರಿ 45 ದಿನಗಳ ಕಾಲ ಮುಂಬೈನಲ್ಲಿ  ಬೀಡುಬಿಟ್ಟು ಫೈಟ್ ಸೀನ್‌ ಮುಗಿಸಿಕೊಟ್ಟಿದ್ದಾರೆ. ಇದೀಗ ಕೊನೆಯ ಹಂತದ ಚಿತ್ರೀಕರಣ ಮಾತ್ರವೇ ಬಾಕಿ ಇದ್ದು ಅದು ಬೆಂಗಳೂರಿನಲ್ಲಿ ನಡೆಯಲಿದೆ. ಸೆಪ್ಟೆಂಬರ್ ಕೊನೆಯ ವಾರದಿಂದ ಟಾಕ್ಸಿಕ್ ಫೈನಲ್ ಹಂತದ ಚಿತ್ರೀಕರಣ ನಡೆಯಲಿದೆ. ಅದಕ್ಕೂ ಮುನ್ನ ಬಿಸಿನೆಸ್...
ಬೆಂಗಳೂರುಸಿನಿಮಾಸುದ್ದಿ

ಬಹು ನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ – ಕಹಳೆ ನ್ಯೂಸ್

ಬೆಂಗಳೂರು : ಬಹು ನಿರೀಕ್ಷಿತ 'ಕಾಂತಾರ ಚಾಪ್ಟರ್ 1' ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಸೆ.22 ಟ್ರೇಲರ್ ರಿಲೀಸ್ ಆಗಲಿದೆ. ಕಾಂತಾರ ಚಾಪ್ಟರ್ 1 ಬಹಳ ನಿರೀಕ್ಷೆ ಮೂಡಿಸಿದ ಸಿನಿಮಾ. ಈ ಸಿನಿಮಾ ಅಕ್ಟೋಬರ್ 2 ರಂದು ತೆರೆಗೆ ಬರಲಿದೆ. ಈ ಚಿತ್ರದ ಟ್ರೇಲರ್ ಸೆ.22 ರಂದು ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ರುಕ್ಮಿಣಿ ವಸಂತ್ ಜೋಡಿಯಾಗಿದ್ದಾರೆ. ನಟ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ...
1 3 4 5 6 7 92
Page 5 of 92