ಡಿ.27: ಗೋಲ್ಡ್ ಫಿಂಚ್ ಸಿಟಿಯಲ್ಲಿ 9ನೇ ವರ್ಷದ ರಾಮಲಕ್ಷ್ಮಣ ಜೋಡುಕರೆ ಕಂಬಳ; ಕ್ಯಾ.ಬ್ರಿಜೇಶ್ ಚೌಟ – ಕಹಳೆ ನ್ಯೂಸ್
ಮಂಗಳೂರು: "9ನೇ ವರ್ಷದ ರಾಮಲಕ್ಷ್ಮಣ ಜೋಡುಕರೆ ಕಂಬಳವು ಶನಿವಾರ(ಡಿ. 27) ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ" ಎಂದು ಕಂಬಳ ಸಮಿತಿಯ ಅಧ್ಯಕ್ಷ ಸಂಸದ ಕ್ಯಾ.ಬ್ರಿಜೇಶ್ ಚೌಟ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. "ಅಂದು ಬೆಳಗ್ಗೆ 8 ಗಂಟೆಗೆ ಕಂಬಳದ ಉದ್ಘಾಟನೆ ನಡೆಯಲಿದ್ದು ಉದ್ಘಾಟನೆಯನ್ನು ಗರೋಡಿ ಬ್ರಹ್ಮ ಬೈದರ್ಕಳ ಕ್ಷೇತ್ರದ ಮೊತ್ತೇಸರ ಚಿತ್ತರಂಜನ್ ಅವರು ದೀಪ ಬೆಳಗಿಸುವ ಮೂಲಕ ನೆರವೇರಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ರಾಘವೇಂದ್ರ ಸಹಿತ ಶಾಸಕರು, ರಾಜಕೀಯ ಸಾಮಾಜಿಕ...







