16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡಲು ಚಿಂತನೆ – ಕಹಳೆ ನ್ಯೂಸ್
ಬೆಂಗಳೂರು: ಸಣ್ಣ ವಯಸ್ಸಿನ ಮಕ್ಕಳಲ್ಲಿ ಮೊಬೈಲ್, ಸೋಷಿಯಲ್ ಮೀಡಿಯಾ ಗೀಳು ದಿನೇ ದಿನೆ ಹೆಚ್ಚುತ್ತಿದೆ. ಪಾಠ-ಆಟ-ಊಟದ ಕಡೆಗಿನ ಆಸಕ್ತಿ ಕಡಿಮೆಯಾಗಿ ಮೊಬೈಲ್ ಲೋಕದಲ್ಲಿ ಮುಳುಗಿ ಹೋಗಿದ್ದಾರೆ. ಹಿಂದೆಲ್ಲಾ ಮಕ್ಕಳಿಗೆ ಚಂದಮಾಮನನ್ನ ತೋರಿಸಿ ಊಟ ಮಾಡಿಸುತ್ತಿದ್ದರು. ಶಾಲೆಯಲ್ಲಿ ಮಕ್ಕಳು ಪಾಠಪ್ರವಚನ, ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದರು. ಆದರೆ, ಈಗ ಮೊಬೈಲ್, ಆನ್‌ಲೈನ್ ಗೇಮಿಂಗ್, ಸೋಷಿಯಲ್ ಮೀಡಿಯಾ ಇವುಗಳೇ ಅವರ ಪ್ರಪಂಚವಾಗಿಬಿಟ್ಟಿದೆ. ಇದು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ....







