ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಗಾಳಿ : ವಿಚ್ಛೇದನಕ್ಕೆ ಮೊರೆ ಹೋದ ದಂಪತಿ -ಕಹಳೆ ನ್ಯೂಸ್
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ. ಮದುವೆಯಾಗಿ ನಾಲ್ಕೇ ವರ್ಷಕ್ಕೆ ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಕನ್ನಡಪರ ಹೋರಾಟಗಾರ ಹಾಗೂ ಉದ್ಯಮಿಯಾಗಿರುವ ಉಡುಪಿ ಮೂಲದ ಸುಮಂತ್ ಬಿಲ್ಲವ...






