ಪಾಕ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ : ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್
ನವದೆಹಲಿ: ಟಿ20 ವಿಶ್ವಕಪ್ 2026 ರಲ್ಲಿ ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿರುವ ಟೀಂ ಇಂಡಿಯಾ ದೆಹಲಿಯಲ್ಲಿ ನಮೀಬಿಯಾ ವಿರುದ್ಧ 2ನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಈ ಮಧ್ಯೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಭಿಷೇಕ್ ಶರ್ಮಾ ಹೊಟ್ಟೆಯ ಸೋಂಕಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಗುರುವಾರ ದೆಹಲಿಯಲ್ಲಿ ನಡೆಯಲಿರುವ ನಮೀಬಿಯಾ ವಿರುದ್ಧದ ಪಂದ್ಯಕ್ಕೆ ಅವರು ಆಡುವುದು ಅನುಮಾನ ಎಂದು ವರದಿಗಳು ತಿಳಿಸಿವೆ. ನಮೀಬಿಯಾ ವಿರುದ್ಧದ...







