ಪಾಕ್ನ ದರ್ಗಾದಲ್ಲಿ ಬಾಂಬ್ ಸ್ಫೋಟ – 31 ಮಂದಿ ದುರ್ಮರಣ – ಕಹಳೆ ನ್ಯೂಸ್
ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ದರ್ಗಾವೊಂದರಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 31 ಮಂದಿ ಸಾವಿಗೀಡಾಗಿದ್ದಾರೆ. ತರ್ಲೈ ಇಮಾಮ್ಬರ್ಗಾದಲ್ಲಿ ಈ ದಾಳಿ ನಡೆದಿದೆ. ಸ್ಫೋಟದ ತೀವ್ರತೆಗೆ 31 ಜನ ಮೃತಪಟ್ಟಿದ್ದು, 169ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸ್ಫೋಟದ ಬಳಿಕ ನಗರದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ . ಗಾಯಾಳುಗಳನ್ನು ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ (PIMS) ಮತ್ತು ಪಾಲಿಕ್ಲಿನಿಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪಾಕಿಸ್ತಾನದ...







