Saturday, June 20, 2026

ಸುದ್ದಿ

ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ದೆಹಲಿ ಸೇರಿ NCR ಪ್ರದೇಶದಾದ್ಯಂತ ಮಳೆ; ಕಾಶ್ಮೀರದಲ್ಲಿ ಹಿಮಪಾತ – ಕಹಳೆ ನ್ಯೂಸ್

ನವದೆಹಲಿ: ದೆಹಲಿ ಸೇರಿ ಎನ್‌ಸಿಆರ್‌ ಪ್ರದೇಶದಾದ್ಯಂತ ಇಂದು ಬೆಳಗ್ಗೆ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಬಲವಾದ ಗಾಳಿ ಬೀಸಿ ಗುಡುಗು, ಮಿಂಚು ಸಹಿತ ಮಳೆ ಸುರಿದಿದೆ. ಹಿಮಾಲಯ ಪ್ರದೇಶದಲ್ಲಿ ಭಾರೀ ಹಿಮಪಾತ ಹಿನ್ನೆಲೆಯಲ್ಲಿ ಮಳೆಯಾಗಿದೆ. ದಿನವಿಡೀ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಮಳೆಯಿಂದಾಗಿ ವಾಯುಮಾಲಿನ್ಯ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು ಬೆಳಗ್ಗೆ 4:50 ಕ್ಕೆ ಆರೆಂಜ್‌ ಅಲರ್ಟ್‌ ನೀಡಿದೆ....
ಬೆಂಗಳೂರುರಾಜ್ಯಸುದ್ದಿ

ಮಹಿಳೆ ಬಿಟ್ಟು ಹೋಗಿದ್ದ ಪರ್ಸ್, ಐಫೋನ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆ ಬಿಟ್ಟು ಹೋಗಿದ್ದ ಪರ್ಸ್, ಐಫೋನ್ ತಂದು ಕೊಟ್ಟ ಆಟೋ ಡ್ರೈವರ್ (Auto Driver) ಕೆಲಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರಿನ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಉತ್ತರ ಭಾರತ ಮೂಲದ ಮಹಿಳೆಯೊಬ್ಬರು ರ‍್ಯಾಪಿಡೊ ಮೂಲಕ ಆಟೋ ಬುಕ್ ಮಾಡಿದ್ದರು. ಪ್ರಯಾಣಿಸಿದ ನಂತರ ಪರ್ಸ್ ಹಾಗೂ ಐಫೋನ್ ಮರೆತು ಆಟೋ ಇಳಿದು ಹೋಗಿದ್ದರು. ಇದಾದ ಕೆಲ ಹೊತ್ತಿನ ನಂತರ ಪರ್ಸ್ ಮತ್ತು ಮೊಬೈಲ್ ಮರೆತಿರೋದು ಗೊತ್ತಾಗಿ ಠಾಣೆಗೆ ಮಾಹಿತಿ ನೀಡಿದ್ದರು....
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ) ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ) ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವನ್ನು ಕೊರಿಂಜ ಸಮುದಾಯ ಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ವಲಯದ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ ರವರು ವಹಿಸಿದರು.ನಿಕಟ ಪೂರ್ವ ವಲಯಾಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ ರವರು ದೀಪ ಬೆಳಗಿಸು ದರೊಂದಿಗೆ ಉದ್ಘಾಟಿಸಿದರು. ತರಬೇತಿ ಕಾರ್ಯಗಾರದಲ್ಲಿ ಯೋಜನಾಧಿಕಾರಿಯವರಾದ ಅಶೋಕ್ ರವರು ಒಕ್ಕೂಟದ ಮಹತ್ವ,ಪದಾಧಿಕಾರಿಗಳ ಜವಾಬ್ದಾರಿ,ಒಕ್ಕೂಟದಲ್ಲಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನ,ಯೋಜನೆಯಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ...
ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಪಾಲರ ಮೇಲಿನ ದೌರ್ಜನ್ಯ ‘ಪ್ರಜಾಪ್ರಭುತ್ವದ ಕಗ್ಗೊಲೆ’; ಸದನವನ್ನು ಬೀದಿ ರಂಪಾಟದ ಅಖಾಡ ಮಾಡಿದ ಕಾಂಗ್ರೆಸ್: ಶಾಸಕ ಕಿಶೋರ್ ಕುಮಾರ್ ಕಿಡಿ – ಕಹಳೆ ನ್ಯೂಸ್

ಬೆಂಗಳೂರು: "ರಾಜ್ಯದ ಪ್ರಥಮ ಪ್ರಜೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದಲ್ಲಿ ಅಡ್ಡಿಪಡಿಸಿ, ಅವರ ದಾರಿಯನ್ನು ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ ಅತ್ಯಂತ ಹೇಯ ಮತ್ತು ಖಂಡನೀಯ. ಇದು ಪ್ರಜಾಪ್ರಭುತ್ವದ ಕರಾಳ ದಿನ," ಎಂದು ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ಮತ್ತು ಕೀಳುಮಟ್ಟದ ರಾಜಕೀಯದ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಜೋಡಿ ಕೊಲೆ ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ “ದಂಡುಪಾಳ್ಯ ಗ್ಯಾಂಗ್ ಕುಖ್ಯಾತ ಆರೋಪಿಯಾ ಬಂಧನ – ಕಹಳೆ ನ್ಯೂಸ್

1997 ರ ಸಾಲಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ನ ಆರೋಪಿ ಚಿಕ್ಕ ಹನುಮ ಚಿಕ್ಕ ಹನುಮಂತಪ್ಪ ಎಂಬಾತನನ್ನು ಆಂದ್ರಪ್ರದೇಶದಲ್ಲಿ ಮಂಗಳೂರು – ಉರ್ವ ಪೊಲೀಸರು ಬಂಧಿಸಿದ್ದಾರೆ. ನ.11-10-1997 ರಂದು ಮಧ್ಯಾರಾತ್ರಿ ಮಂಗಳೂರು ತಾಲೂಕು ಉರ್ವಾ ಮಾರಿಗುಡಿ ಕ್ರಾಸ್ ಬಳಿರುವ ಅನ್ವರ್ ಮಹಲ್ ಎಂಬ ಮನೆಗೆ ನುಗ್ಗಿದ ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ...
ಸುದ್ದಿ

ಶೌರ್ಯ ವೀಪತು ನಿರ್ವಹಣಾ ಘಟಕ ಕಲ್ಲಡ್ಕ ಮಾಸಿಕ ಸಭೆ, ಹಾಗೂ ಸದಸ್ಯರಿಗೆ ಶೌರ್ಯ ಬ್ಯಾಗ್ ಹಸ್ತಾಂತರ- ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವೀಪತು ನಿರ್ವಹಣಾ ಘಟಕ ಕಲ್ಲಡ್ಕ ಇದರ ಮಾಸಿಕ ಸಭೆ, ಘಟಕ ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರೆಬೆಟ್ಟುರವರ ಅಧ್ಯಕ್ಷತೆಯಲ್ಲಿ ಜನವರಿ 22 ಗುರುವಾರ ಕಲ್ಲಡ್ಕ ವಲಯ ಕಚೇರಿಯಲ್ಲಿ ಜರಗಿತು. ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ ಶೌರ್ಯ ತಂಡದ ಎಲ್ಲಾ ಸದಸ್ಯರಿಗೆ ಯೋಜನೆಯಿಂದ ಕೊಡಲ್ಪಟ್ಟ ಶೌರ್ಯ ಬ್ಯಾಗ್...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಿಗ್ ರಿಲೀಫ್..!! ನಿನ್ನೆ ಪುತ್ತೂರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಇಂದು ಹೈಕೋರ್ಟ್ ಮಹತ್ವದ ಆದೇಶ – ಕಹಳೆ ನ್ಯೂಸ್

ಪುತ್ತೂರು / ಬೆಂಗಳೂರು : ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಆರ್.ಎಸ್‌. ಎಸ್‌. ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ದಾಖಲಾಗಿದ್ದ, ಪ್ರಕರಣದ ಕುರಿತು ಹೈ ಕೋರ್ಟ್ ಮಹತ್ವದ ಆದೇಶ ಮಾಡಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 10/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂಗಳು 196, 299, 302, 353(2), 3(5) ರಂತೆ ಪ್ರಕರಣ ದಾಖಲಾಗಿತ್ತು. ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ...
ಸುದ್ದಿ

ಕಾಸರಗೋಡು-ಮಂಗಳೂರು KSRTC ಪ್ರಯಾಣಿಕರಿಗೆ ಟೋಲ್ ಬಿಸಿ : ಬಸ್ ದರ 7 ರೂ.ಗೆ ಹೆಚ್ಚಳ – ಕಹಳೆ ನ್ಯೂಸ್

ಕುಂಬಳೆ ಅರಿಕ್ಕಾಡಿಯಲ್ಲಿ ಟೋಲ್ ಸಂಗ್ರಹ ಆರಂಭವಾದ ಹಿನ್ನೆಲೆಯಲ್ಲಿ ಕಾಸರಗೋಡು-ಮಂಗಳೂರು ನಡುವೆ ಸಂಚರಿಸುವ ಕರ್ನಾಟಕ ಸಾರಿಗೆ (KSRTC) ಬಸ್ ದರವನ್ನು ಹೆಚ್ಚಿಸಲಾಗಿದ್ದು, ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಅಂತರರಾಜ್ಯ ಹೆದ್ದಾರಿಯ ಟೋಲ್ ಬೂತ್ ಮೂಲಕ ಹಾದುಹೋಗುವ ಪ್ರತಿ ಪ್ರಯಾಣಿಕರು ಈಗ ಮೂಲ ದರಕ್ಕಿಂತ ಹೆಚ್ಚುವರಿಯಾಗಿ 7 ರೂಪಾಯಿ ಪಾವತಿಸಬೇಕಾಗುತ್ತದೆ. ಈವರೆಗೆ ಕಾಸರಗೋಡಿನಿಂದ ಮಂಗಳೂರಿಗೆ 81 ರೂಪಾಯಿ ಇದ್ದ ಟಿಕೆಟ್ ದರವು ಇದೀಗ 88 ರೂಪಾಯಿಗಳಿಗೆ ಏರಿಕೆಯಾಗಿದೆ. ವಿಶೇಷವೆಂದರೆ, ಟೋಲ್ ದಾಟಿದ ತಕ್ಷಣದ...
1 170 171 172 173 174 3,399
Page 172 of 3399